ಮುನಿರತ್ನ ನಾಯ್ಡು, ಪ್ರಜ್ವಲ್ ರೇವಣ್ಣ & ಬಿಟ್ ಕಾಯಿನ್ ತನಿಖೆಗೆ ಇಷ್ಟು ಕೋಟಿ ಖರ್ಚು!
ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜಕಾರಣಿಗಳ ಮೇಲಿನ ಗಂಭೀರ ಪ್ರಕರಣಗಳ ತನಿಖೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ. ಕರ್ನಾಟಕದಲ್ಲಿ ವಿವಿಧ ಗಂಭೀರ ಪ್ರರಣಗಳು ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣಗಳಿಗೆ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಎಷ್ಟು ಹಣ ಖರ್ಚು ಮಾಡಿದೆ ಎನ್ನುವ ವಿಷಯವು ಇದೀಗ ಬಹಿರಂಗವಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ (ವಿಶೇಷ ತನಿಖಾ ದಳ) ರಚನೆ ಮಾಡಿದೆ. ಕರ್ನಾಟಕದ ಕಾನೂನು ವ್ಯವಸ್ಥೆಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕರ್ನಾಟಕ ಗೃಹ ಇಲಾಖೆಯೇ ನೀಡಿರುವ ಮಾಹಿತಿಯಂತೆ ವಿವಿಧ ತನಿಖೆಗೆ ಲಕ್ಷ ಲಕ್ಷ ರೂಪಾಯಿ ಹಣವನ್ನು ಕರ್ನಾಟಕ ಸರ್ಕಾರ ಖರ್ಚು ಮಾಡಿದೆ. ಒಟ್ಟಾರೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 4.54 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಮುಖ್ಯವಾಗಿ ರಾಜಕಾರಣಿಗಳಾದ ಪ್ರಜ್ವಲ್ ರೇವಣ್ಣ ಹಾಗೂ ಮುನಿರತ್ನ ನಾಯ್ಡು ಅವರ ಕೇಸ್‌ಗಳಿಗೆ ಹೆಚ್ಚು ಖರ್ಚು ಮಾಡಲಾಗಿದೆ.

ಸೋಷಿಯಲ್ ಮೀಡಿಯಾ ನಮ್ಮ ನಾಡು ನಮ್ಮ ಆಳ್ವಿಕೆ ಖಾತೆಯಿಂದ ಕರ್ನಾಟಕದ ಕಾನೂನು ವ್ಯವಸ್ಥೆಗೆ ಹಿಡಿದ ಕೈಗನ್ನಡಿಗಳು ಈ ಪ್ರಕರಣಗಳು. ಶಾಸಕ ಮುನಿರತ್ನ ನಾಯ್ಡು ವಿರುದ್ಧ ಇರುವ ಆರು ಪ್ರಕರಣಗಳ ತನಿಖೆಗೆ ಇಲ್ಲಿಯವರೆಗೂ 44.6 ಲಕ್ಷ ಖರ್ಚಾಗಿದೆ. ಆದರೆ ಅದರಲ್ಲಿ ಮೂರು ಪ್ರಕರಣಗಳಲ್ಲಿ ಸಾಕ್ಷಿ ಇಲ್ಲ ಅಂತ ಪೊಲೀಸರೇ "B Report" ಹಾಕಿದ್ದಾರೆ. ಎರಡು ಪ್ರಕರಣಗಳಲ್ಲಿ ಮಾತ್ರ ಆರೋಪ ಪಟ್ಟಿ ಹಾಕಿ ಇನ್ನು ಒಂದು ಕೇಸ್ ತನಿಖೆ ಮುಗಿಸಿಲ್ಲ! ಇನ್ನು ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಮಾಜಿ ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್ ಒಬ್ಬರಿಗೇ 2.4 ಕೋಟಿ ರೂಪಾಯಿ ಫೀಸ್ ನೀಡಲಾಗಿದೆ. ಕಾಂಗ್ರೆಸ್ ಸದಸ್ಯರೂ ಆಗಿದ್ದ ಕಪಿಲ್ ಸಿಬಲ್ ಒಂದೇ ಒಂದು ಹಾಜರಿಗೆ 15.5 ಲಕ್ಷ! ಇದ್ಯಾರಿಗೆ #ತನಿಖೆ_ಭಾಗ್ಯ ಎಂದು ಟೀಕೆ ಮಾಡಿದ್ದಾರೆ.
ಯಾವ ಪ್ರಕರಣಗಳಿಗೆ ಎಷ್ಟು ವೆಚ್ಚ ?
ಎಸ್‌ಐಟಿ ವೆಚ್ಚ
ಬಿಟ್‌ಕಾಯಿನ್ 69,73,068
ಪ್ರಜ್ವಲ್ ರೇವಣ್ಣ 3,31,49,355
ಎಸ್‌ಟಿ ಕ್ರಾಪ್ 8,83,818
ಮುನಿರತ್ನ ನಾಯ್ಡು 44,60,864
ಒಟ್ಟು 4,54,67,105
ದರ್ಶನ್ ಪ್ರಕರಣಕ್ಕೂ ಹೆಚ್ಚು ಖರ್ಚು: ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪ್ರಕರಣಕ್ಕೂ ಹೆಚ್ಚು ವೆಚ್ಚ ಮಾಡಿರುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ರಾಜ್ಯ ಗೃಹ ಇಲಾಖೆಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದ್ದು, ಹೈಕೋರ್ಟ್ ನೀಡಿದ್ದ ತೀರ್ಪನ್ನು ರಾಜ್ಯ ಸರ್ಕಾರವೇ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಹೀಗಾಗಿ, ಈ ಪ್ರಕರಣದಲ್ಲೂ ಹೆಚ್ಚು ವೆಚ್ಚ ಮಾಡಿರುವ ಸಾಧ್ಯತೆ ಇದೆ. ಆದರೆ ಸದ್ಯ ಎಸ್‌ಐಟಿ ತನಿಖೆ ಹಾಗೂ ಕೆಲವು ಪ್ರಮುಖ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮಾತ್ರ ಹಂಚಿಕೊಳ್ಳಲಾಗಿದೆ. ರಾಜ್ಯ ಸರ್ಕಾರವು ತನಿಖೆಗಾಗಿಯೇ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications