ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನ ಪರ ಘೋಷಣೆ; ಅಮೂಲ್ಯ 4 ದಿನ ಪೊಲೀಸ್ ವಶಕ್ಕೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 25 : 'ಪಾಕಿಸ್ತಾನ್‌ ಜಿಂದಾಬಾದ್‌' ಎಂದು ಘೋಷಣೆ ಕೂಗಿರುವ ಆರೋಪದ ಮೇಲೆ ಬಂಧಿತರಾಗಿರುವ ಅಮೂಲ್ಯ ಲಿಯೋನ್‌ರನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

Recommended Video

Amulya Leona handover for the 4 days of police custody | Oneindia Kannada

ಮಂಗಳವಾರ ರಾತ್ರಿ 5ನೇ ಎಸಿಎಂಎಂ ನ್ಯಾಯಾಧೀಶರ ನಿವಾಸಕ್ಕೆ ಅಮೂಲ್ಯರನ್ನು ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶರು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

ಪಾಕ್ ಜಿಂದಾಬಾದ್: ಅಮೂಲ್ಯ ವಿಶ್ವಮಾನವ ತತ್ವ ಹೊಂದಿದ್ದಾಳೆ, ಡಿಕೆಶಿ ಪಾಕ್ ಜಿಂದಾಬಾದ್: ಅಮೂಲ್ಯ ವಿಶ್ವಮಾನವ ತತ್ವ ಹೊಂದಿದ್ದಾಳೆ, ಡಿಕೆಶಿ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಅಮೂಲ್ಯ ಲಿಯೋನ್ 'ಪಾಕಿಸ್ತಾನ್‌ ಜಿಂದಾಬಾದ್‌' ಎಂದು ಘೋಷಣೆ ಕೂಗಿದ್ದರು. ಆದ್ದರಿಂದ, ಅವರನ್ನು ಬಂಧಿಸಲಾಗಿತ್ತು.

ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಹುಟ್ಟೂರಿಗೆ ಎಸ್‌ಐಟಿ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಹುಟ್ಟೂರಿಗೆ ಎಸ್‌ಐಟಿ

4 Days Police Custody For Amulya Leon

ಫೆಬ್ರವರಿ 20ರ ಗುರುವಾರ ಅಮೂಲ್ಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರು ಇದ್ದರು. ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.

'ಪಾಕಿಸ್ತಾನ್ ಜಿಂದಾಬಾದ್' ಎಂದ ಅಮೂಲ್ಯ ಬಗ್ಗೆ ಪಾಕ್ ಮಾಧ್ಯಮಗಳ ಸುದ್ದಿ'ಪಾಕಿಸ್ತಾನ್ ಜಿಂದಾಬಾದ್' ಎಂದ ಅಮೂಲ್ಯ ಬಗ್ಗೆ ಪಾಕ್ ಮಾಧ್ಯಮಗಳ ಸುದ್ದಿ

ಅಮೂಲ್ಯರನ್ನು ತಮ್ಮ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಠಾಣೆಯ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

'ಪಾಕಿಸ್ತಾನ್‌ ಜಿಂದಾಬಾದ್‌' ಎಂದು ಘೋಷಣೆ ಕೂಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಮೂಲ್ಯ ಸ್ನೇಹಿತರನ್ನು ವಿಚಾರಣೆ ನಡೆಸಿದ್ದಾರೆ. ಅಮೂಲ್ಯ ವಾಸವಾಗಿದ್ದ ಪಿಜಿಯಲ್ಲಿಯೂ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

English summary
Amulya Leon handover for the 4 days of police custody. Amulya arrested by police after she raised slogan of Pakistan zindabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X