4 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಮೈಸೂರಿಗೆ ಹೊಸ ಆಯುಕ್ತರು
ಬೆಂಗಳೂರು, ಜನವರಿ 25 : ಕರ್ನಾಟಕ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರಿಗೆ ಹೊಸ ಪೊಲೀಸ್ ಆಯುಕ್ತರ ನೇಮಕವಾಗಿದೆ.
ಕರ್ನಾಟಕ ಸರ್ಕಾರ ಗುರುವಾರ ರಾತ್ರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಕೆಲವು ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ನಗರಕ್ಕೆ ಹೊಸ ಆಯುಕ್ತರನ್ನು ನೇಮಕ ಮಾಡಲಾಗಿದೆ.

* ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ.ಎಸ್.ಲೋಕೇಶ್ ಅವರಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.
* ಗುಪ್ತಚರ ಇಲಾಖೆ ಎಸ್‌ಪಿಯಾಗಿದ್ದ ಕೆ.ಟಿ.ಬಾಲಕೃಷ್ಣ ಅವರಿಗೆ ಬಡ್ತಿ ನೀಡಲಾಗಿದೆ. ಅವರನ್ನು ಮೈಸೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
* ಬೆಂಗಳೂರು ವೈರ್‌ಲೆಸ್ ವಿಭಾಗದ ಎಸ್‌ಪಿಯಾಗಿದ್ದ ಪಿ.ರಾಜೇಂದ್ರ ಪ್ರಸಾದ್ ಅವರಿಗೆ ಬಡ್ತಿ ನೀಡಲಾಗಿದೆ. ಅವರನ್ನು ಬೆಳಗಾವಿ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
* ಆರ್.ರಮೇಶ್ ಅವರನ್ನು ಯೋಜನೆ ಮತ್ತು ಆಧುನೀಕರಣ ವಿಭಾಗದ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.












Click it and Unblock the Notifications