ಹಾವೇರಿ:ಟೈರ್ ಸ್ಪೋಟಗೊಂಡು ಕಾರು ಪಲ್ಟಿ, ನಾಲ್ವರ ದುರ್ಮರಣ
ಹಾವೇರಿ, ಆಗಸ್ಟ್ 21 : ಇನೋವಾ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಸೋಮವಾರ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದ ಬಳಿ ನಡೆದಿದೆ.
ಮೃತರು ರಾಣೇಬೆನ್ನೂರು ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ತಮ್ಮ ಸಂಬಂಧಿಕರನ್ನು ಹಜ್ ಯಾತ್ರೆ ಕಳುಹಿಸಿ ಹುಬ್ಬಳ್ಳಿಯಿಂದ ದಾವಣಗೆರೆಗೆ ಹೊರಟಿದ್ದ ವೇಳೆ ಕಾರಿನ ಟಯರ್ ಸ್ಪೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಅಣ್ಣಪ್ಪ ನಾಯಕ್ ಸೇರಿದಂತೆ ಬಂಕಾಪುರ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದರು.












Click it and Unblock the Notifications