ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು : ಕುಮಟಾದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, 4 ಸಾವು

|
Google Oneindia Kannada News

ಉತ್ತರ ಕನ್ನಡ, ಸೆ. 01 : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ನಡೆದ ಅಘಾತದಲ್ಲಿ 4 ಜನರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗ್ಯಾಸ್ ಟ್ಯಾಂಕರ್ ಸ್ಫೋಟದ ತೀವ್ರತೆಗೆ ರಸ್ತೆಯ ಅಕ್ಕ-ಪಕ್ಕದ ಮನೆಗಳಿಗೆ ಹಾನಿ ಉಂಟಾಗಿದೆ.

ಕುಮಟಾ ತಾಲೂಕಿನ ಬರ್ಗಿ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ಈ ಅಪಘಾತ ನಡೆದಿದೆ. ಮಂಗಳೂರಿನಿಂದ ಗೋವಾಕ್ಕೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ನಂತರ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವವಾಗಿ ದಹನವಾಗಿದ್ದಾನೆ.

uttara kannada

ಬೆಂಕಿ ಹೊತ್ತಿಕೊಂಡ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡ ರಭಸಕ್ಕೆ ರಸ್ತೆಯ ಅಕ್ಕ-ಪಕ್ಕದ ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ಈ ವೇಳೆ ಮನೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕೆಲವು ಮನೆಗಳ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಮನೆಗಳಿಗೆ ಹಾನಿ ಉಂಟಾಗಿದೆ.

gas

ಈ ಅಪಘಾತದಲ್ಲಿ 4 ಜನರು ಮೃತಪಟ್ಟಿದ್ದರೆ, 15ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕುಮಟಾ ತಾಲೂಕು ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿ ಶಾಮಕದಳದವರು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದಾರೆ.

ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋ ಕೆಮಿಕಲ್ಸ್‌ (ಎಂಆರ್‌ಪಿಎಲ್‌)ಗೆ ಸೇರಿದ ಟ್ಯಾಂಕರ್ ಗೋವಾಕ್ಕೆ ತೆರಳುತ್ತಿತ್ತು. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

kumta
English summary
4 persons were killed and 15 injured when a tanker carrying Liquefied Petroleum Gas (LPG) overturned in Kumta taluk of Uttara Kannada district on Tuesday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X