ಆಂಬ್ಯುಲೆನ್ಸ್‌ಗೆ ಟ್ಯಾಂಕರ್ ಡಿಕ್ಕಿ, ನಾಲ್ವರು ಸಾವು
ಬೀದರ್, ನ.12 : ಹೈದರಾಬಾದ್‌ಗೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್‌ಗೆ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ಮೊಳಕೆರ ಗ್ರಾಮ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್‌ನ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಬುಧವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ಔರಂಗಾಬಾದ್‌ನಿಂದ ಹೈದರಾಬಾದ್‌ಗೆ ಜಿತೇಂದ್ರ ಎನ್ನುವವರ ಶವವನ್ನು ಆಂಬ್ಯುಲೆನ್ಸ್ ಮೂಲಕ ಸಾಗಿಸಲಾಗುತ್ತಿತ್ತು.

ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹುಮ್ನಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.












Click it and Unblock the Notifications