ಕರ್ನಾಟಕದಲ್ಲಿ 4 ಲಕ್ಷ ಜನರು ಕೋವಿಡ್‌ನಿಂದ ಗುಣಮುಖ
ಬೆಂಗಳೂರು, ಸೆಪ್ಟೆಂಬರ್ 20 : ಶನಿವಾರ ಕರ್ನಾಟಕದಲ್ಲಿ 10815 ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 404841ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ಶನಿವಾರ ರಾಜ್ಯದಲ್ಲಿ 8,364 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಇದರಿಂದಾಗಿ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 51,13,46.
ಕರ್ನಾಟಕದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 98,564. ಇದುವರೆಗೂ ಗುಣಮುಖರಾದವರ ಸಂಖ್ಯೆ 404841. ಇದುವರೆಗೂ ರಾಜ್ಯದಲ್ಲಿ 7922 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಬೆಂಗಳೂರು ನಗರದಲ್ಲಿ 3,733 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1,91,438ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 41,434.

1.55 ಲಕ್ಷ ಮಂದಿ ಚೇತರಿಕೆ
ಕರ್ನಾಟಕದಲ್ಲಿ ಕಳೆದ 19 ದಿನದಲ್ಲಿ 1.55 ಲಕ್ಷ ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಪ್ರತಿನಿತ್ಯ ಸರಾಸರಿ 8,177 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 404841ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರು 5 ಲಕ್ಷ
ಕರ್ನಾಟಕದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 51,13,46ಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ಇಲ್ಲಿಯ ತನಕ 1.76 ಲಕ್ಷ ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವ ಜಿಲ್ಲೆ ಬೆಂಗಳೂರು ನಗರ.

ಒಟ್ಟು ಮೃತಪಟ್ಟವರು
ಶನಿವಾರ ಕರ್ನಾಟಕದಲ್ಲಿ 114 ಜನರು ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇದರಿಂದಾಗಿ ಒಟ್ಟು ಮೃತಪಟ್ಟವರ ಸಂಖ್ಯೆ 7922ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಶನಿವಾರ 33 ಜನರು ಮೃತಪಟ್ಟಿದ್ದಾರೆ. ನಗರದಲ್ಲಿ ಒಟ್ಟು ಮೃತಪಟ್ಟವರು 2625.
Recommended Video

ಸಕ್ರಿಯ ಪ್ರಕರಣಗಳ ಸಂಖ್ಯೆ
ಕರ್ನಾಟಕದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 98,564. ಬೆಂಗಳೂರು ನಗರದಲ್ಲಿ 41,434 ಸೋಂಕಿತರು ಇದ್ದಾರೆ. ಬಳ್ಳಾರಿಯಲ್ಲಿ 41434, ಬೆಳಗಾವಿಯಲ್ಲಿ 2295, ದಕ್ಷಿಣ ಕನ್ನಡದಲ್ಲಿ 4528 ಮತ್ತು ಹಾಸನದಲ್ಲಿ ಸೋಂಕಿತರು 3047.












Click it and Unblock the Notifications