ಮುಸ್ಲಿಮರಿಗೆ ಶೇ4 ಮೀಸಲಾತಿ: ಬಿಜೆಪಿ ಜೊತೆ ಹೋರಾಟದ ಬಗ್ಗೆ ಎಚ್‌.ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ!

ಕರ್ನಾಟಕ ಕಾಂಗ್ರೆಸ್‌ ಸರ್ಕಾರವು ಸರ್ಕಾರದ ಗುತ್ತಿಗೆಯಲ್ಲಿ ಮುಸ್ಲಿಮರು / ಅಲ್ಪಸಂಖ್ಯಾತರಿಗೆ ಶೇ 4% ಮೀಸಲಾತಿ ನೀಡಲು ಮುಂದಾಗಿದೆ. ಈ ಮಸೂದೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಷ್ಟ್ರ ಮಟ್ಟದಲ್ಲಿ ಈ ವಿಚಾರ ಚರ್ಚೆಯಾಗುತ್ತಿದೆ. ಈ ಸಂಬಂಧ ಸೋಮವಾರ ರಾಜ್ಯಸಭೆಯಲ್ಲೂ ಚರ್ಚೆ ನಡೆದಿದ್ದು. ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಈ ವಿಷಯವನ್ನು ಪ್ರಸ್ತಾವನೆ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಮೀಸಲಾತಿ ನಿರ್ಧಾರದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆದಿದೆ. ಇದರ ನಡುವೆ ಈ ವಿಷಯದ ಹೋರಾಟದಲ್ಲಿ ಕರ್ನಾಟಕ ಬಿಜೆಪಿಯೊಂದಿಗೆ ಜೆಡಿಎಸ್ ಕೈಜೋಡಿಸಲ್ಲ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ರಿಯಾಕ್ಟ್‌ ಮಾಡಿದ್ದಾರೆ.

ಮುಸ್ಲಿಮರಿಗೆ ಸರ್ಕಾರದ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ವಿಚಾರವಾಗಿ ಜೆಡಿಎಸ್‌ ತಟಸ್ಥ ನಿಲುವು ತೆಳೆದಿದೆ ಎನ್ನುವ ವಿಷಯ ಚರ್ಚೆಯಾಗುತ್ತಿತ್ತು. ಇದೀಗ ಈ ವಿಚಾರವಾಗಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ರಿಯಾಕ್ಟ್‌ ಮಾಡಿದ್ದಾರೆ. ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಸ್ಲಿಮರಿಗೆ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಶೇ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ. ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರವಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

4 Reservation for Muslims Union Minister H D Kumaraswamy s Surprising Statement

ಈ ಮೂಲಕ ಈ ಹೋರಾಟದಲ್ಲಿ ಜೆಡಿಎಸ್ ಸಹ ಕೈ ಜೋಡಿಸಲಿದೆ ಎನ್ನುವುದು ಸ್ಪಷ್ಟವಾದಂತೆ ಆಗಿದೆ. ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ #NDA 'ಸಮನ್ವಯ ಸಮಿತಿ' ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

Take a Poll

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ 'ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ'ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್‌ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಜೆಡಿಎಸ್ - ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ. ಮುಂದೆಯೂ ನಾವು ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್‌ನ ಅಚಲ ನಿಲುವು ಆಗಿದೆ ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+