ಕರ್ನಾಟಕದ 24 ಜಿಲ್ಲೆಗಳಲ್ಲಿ ಎರಡಂಕಿಯ ಕೊವಿಡ್-19 ಪ್ರಕರಣ

ಬೆಂಗಳೂರು, ಫೆಬ್ರವರಿ.18: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ತಗ್ಗಿದೆ. ರಾಜ್ಯದ 24 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿಕೆಯಾಗಿದೆ. ಬೆಂಗಳೂರು ನಗರವನ್ನು ಹೊರತುಪಡಿಸಿ ಉಳಿದ 5 ಜಿಲ್ಲೆಗಳಲ್ಲಿ ಎರಡಂಕಿಯ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಗಳಲ್ಲಿ 406 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 946860ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ನಿಂದ 6 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12282ಕ್ಕೆ ಏರಿಕೆ ಆಗಿದೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 946860 ಸೋಂಕಿತ ಪ್ರಕರಣಗಳ ಪೈಕಿ 928767 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲೇ 306 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 5792 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

 406 New Coronavirus Cases Reported in Karnataka Today, State Tally Rise to 946860

ರಾಜ್ಯದ 24 ಜಿಲ್ಲೆಗಳಲ್ಲಿ ಒಂದಂಕಿ ಕೊವಿಡ್-19 ಪ್ರಕರಣ:

ರಾಜ್ಯದಲ್ಲಿ ಒಟ್ಟು 406 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಅಷ್ಟಾಗಿಯೂ ರಾಜ್ಯ 24 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗಿಂತ ಹೆಚ್ಚಾಗಿಲ್ಲ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು 256, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 0, ಚಿತ್ರದುರ್ಗ 3, ದಕ್ಷಿಣ ಕನ್ನಡ 20, ದಾವಣಗೆರೆ 4, ಧಾರವಾಡ 6, ಗದಗ 3, ಹಾಸನ 5, ಹಾವೇರಿ 0, ಕಲಬುರಗಿ 14, ಕೊಡಗು 0, ಕೋಲಾರ 2, ಕೊಪ್ಪಳ 1, ಮಂಡ್ಯ 6, ಮೈಸೂರು 12, ರಾಯಚೂರು 2, ರಾಮನಗರ 3, ಶಿವಮೊಗ್ಗ 6, ತುಮಕೂರು 24, ಉಡುಪಿ 4, ಉತ್ತರ ಕನ್ನಡ 7, ವಿಜಯಪುರ 3, ಯಾದಗಿರಿ 3 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      Amit Shah ಸವಾಲೆಸೆದ ಮಮತಾ ಬ್ಯಾನರ್ಜಿ, ಪ.ಬಂಗಾಳದಲ್ಲಿ ಮುಂದುವರೆದ ವಾಕ್‌ ಸಮರ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+