ಕರ್ನಾಟಕದಲ್ಲಿ 2ನೇ ದಿನ 40 ಸಾವಿರದ ಗಡಿ ದಾಟಿದ ಕೊರೊನಾವೈರಸ್
ಬೆಂಗಳೂರು, ಮೇ 1: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪ್ರತಿನಿತ್ಯ 40 ಸಾವಿರದ ಗಡಿ ದಾಟುತ್ತಿವೆ. ಕಳೆದ ಒಂದು ದಿನದಲ್ಲಿ 40990 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿನಿಂದ 271 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 18,341 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಸ್ತೆಯಲ್ಲೇ ಸಾವು, ಪಾದಾಚಾರಿ ಮಾರ್ಗವೇ ಹಾಸಿಗೆ: ಇದು ಕೊರೊನಾ ತಂದಿತ್ತ ಪರಿಸ್ಥಿತಿ
ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 1564132 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಈವರೆಗೂ 11,24,909 ಸೋಂಕಿತರು ಗುಣಮುಖರಾಗಿದ್ದು, 15,794 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 4,05,068 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಕೊರೊನಾವೈರಸ್ ಸ್ಫೋಟ:
ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ದೃಢಪಟ್ಟಿವೆ. ಒಂದು ದಿನದಲ್ಲಿ ಸಿಲಿಕಾನ್ ಸಿಟಿಯಲ್ಲೇ 19353 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಹಾಮಾರಿಗೆ 162 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 6537ಕ್ಕೆ ಏರಿಕೆಯಾಗಿದೆ. 2,70,993 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಯಾವ ಜಿಲ್ಲೆಯಲ್ಲಿ ಎಷ್ಟು ಕೊರೊನಾ ಪ್ರಕರಣ?:
ರಾಜ್ಯದಲ್ಲಿ ಒಟ್ಟು 40990 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 319, ಬಳ್ಳಾರಿ 1163, ಬೆಳಗಾವಿ 532, ಬೆಂಗಳೂರು ಗ್ರಾಮಾಂತರ 940, ಬೆಂಗಳೂರು 19353, ಬೀದರ್ 360, ಚಾಮರಾಜನಗರ 548, ಚಿಕ್ಕಬಳ್ಳಾಪುರ 820, ಚಿಕ್ಕಮಗಳೂರು 500, ಚಿತ್ರದುರ್ಗ 103, ದಕ್ಷಿಣ ಕನ್ನಡ 933, ದಾವಣಗೆರೆ 386, ಧಾರವಾಡ 540, ಗದಗ 205, ಹಾಸನ 790, ಹಾವೇರಿ 168, ಕಲಬುರಗಿ 1407, ಕೊಡಗು 590, ಕೋಲಾರ 440, ಕೊಪ್ಪಳ 1019, ಮಂಡ್ಯ 1235, ಮೈಸೂರು 2529, ರಾಯಚೂರು 601, ರಾಮನಗರ 577, ಶಿವಮೊಗ್ಗ 661, ತುಮಕೂರು 2308, ಉಡುಪಿ 670, ಉತ್ತರ ಕನ್ನಡ 687, ವಿಜಯಪುರ 340, ಯಾದಗಿರಿ 266 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications