ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ದಾಖಲೆಯ ಕೊರೊನಾ ಪ್ರಕರಣ ಪತ್ತೆ

|
Google Oneindia Kannada News

ಬೆಂಗಳೂರು, ಜನವರಿ 18: ಕರ್ನಾಟಕದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ರಾಜ್ಯದಲ್ಲಿ ಇಂದು (ಮಂಗಳವಾರ) ಒಂದೇ ದಿನ 41,457 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ. ಇದು ಮೂರನೇ ಅಲೆಯಲ್ಲಿ ಪತ್ತೆಯಾದ ಅತೀ ದೊಡ್ಡ ಸಂಖ್ಯೆಯಾಗಿದೆ.

ಇಂದು ಪತ್ತೆಯಾದ ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಬೆಂಗಳೂರಿನಲ್ಲೇ 25,595 ಕೋವಿಡ್ ಸೋಂಕು ದೃಢಪಟ್ಟಿವೆ. ಇಂದು 8,353 ಸೋಂಕಿತರು ಚೇತರಿಕೆಯಾಗಿದ್ದು, ರಾಜ್ಯದಲ್ಲಿ ಇಂದು 20 ಸೋಂಕಿತರ ಸಾವನ್ನಪ್ಪಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲೇ 7 ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಪಾಸಿಟಿವಿಟಿ ದರ 22.30% ಇದ್ದು, ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2,50,381ಕ್ಕೆ ಏರಿಕೆ ಕಂಡಿದೆ. ಇಂದು ರಾಜ್ಯದಲ್ಲಿ 1,85,872 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

41,457 New Covid-19 Cases Reported in Karnataka in last 24 Hours

ಒಂದು ದಿನಕ್ಕೆ 1.2 ಲಕ್ಷ ಕೇಸ್‌ಗಳು ಸಿಗಬಹುದು
ಕರ್ನಾಟಕದಲ್ಲಿ ಕೊರೊನಾ ಸೋಂಕಿನ 3ನೇ ಅಲೆಯು ಉತ್ತುಂಗಕ್ಕೆ ಹೋದಾಗ ಪ್ರತಿದಿನ ಸರಾಸರಿ 80 ಸಾವಿರದಿಂದ 1.20 ಲಕ್ಷ ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳಬಹುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ರಾಜ್ಯದ 18 ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ನಂತರ ಮಾಹಿತಿ ನೀಡಿದ ಸಚಿವರು, ಕೊರೊನಾ ಸೋಂಕು ಹೆಚ್ಚಾಗುವ ವಿಷಯವನ್ನು ತಜ್ಞರ‌ ವರದಿ ತಿಳಿಸಿದೆ. ವರದಿಯಲ್ಲಿ ಉಲ್ಲೇಖಿಸಿರುವಂತೆಯೇ ಪ್ರಸ್ತುತ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಏರಿದಷ್ಟೇ ವೇಗವಾಗಿ ಸೋಂಕು ಪ್ರಕರಣಗಳು ಇಳಿಯಬಹುದು. ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿದಿನ 2ರಿಂದ 2.50 ಲಕ್ಷ ಟೆಸ್ಟ್ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಕೇಸ್ ಹೆಚ್ಚಾಗುತ್ತಿದೆ. ಇಂದು ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದ್ದು, ಸಾವಿನ ಪ್ರಮಾಣ ಕಡಿಮೆಯಾಗಿದೆ. ವೀಕೆಂಡ್​ ಕರ್ಫ್ಯೂ ಬಗ್ಗೆ ಶುಕ್ರವಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಸುಧಾಕರ್ ಮಾಹಿತಿ ಹಂಚಿಕೊಂಡರು.

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ (ICMR) ರೂಪಿಸಿರುವ ಮಾರ್ಗಸೂಚಿಗೆ ಅನುಗುಣವಾಗಿ ಕೋವಿಡ್ ತಪಾಸಣೆಗಳಿಗೆ ವೇಗ ನೀಡಲು ಸಲಹೆ ನೀಡಲಾಗಿದೆ. ರಾಜ್ಯದ ಪ್ರತಿ ಜಿಲ್ಲೆ, ಪ್ರತಿ ಗ್ರಾಮದಲ್ಲಿಯೂ ಕೊರೊನಾ ವಾರ್​ರೂಂ ಸ್ಥಾಪನೆಯಾಗಬೇಕಿದೆ. ಇದರಿಂದ ಆಸ್ಪತ್ರೆಗೆ ಹೋಗುವವರ ಸಂಖ್ಯೆ ಕಡಿಮೆ‌ ಆಗುತ್ತದೆ. ಹೋಂ ಐಸೋಲೇಷನ್ ಇದ್ದವರಿಗೆ ಕಿಟ್ ವ್ಯವಸ್ಥೆಗೆ ಸೂಚಿಸಿದ್ದೇವೆ ಎಂದರು.

ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿಯ ಮನೆಗೆ ಕಿಟ್​ ತಲುಪಿಸುವ ವ್ಯವಸ್ಥೆಯನ್ನು ನಗರ ಮತ್ತು ಗ್ರಾಮ ಮಟ್ಟದಲ್ಲಿ ಜಾರಿಗೊಳಿಸಲಾಗಿದೆ. ಉದ್ದೇಶಿತ 264 ಆಕ್ಸಿಜನ್ ಪ್ಲಾಂಟ್​ಗಳ ಪೈಕಿ 222ಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

60 ವರ್ಷ ದಾಟಿದವರಿಗೆ ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳಲು ಪ್ರಚಾರ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಈ ವಯೋಮಾನದ ಶೇ.39ರಷ್ಟು ಜನರು 3ನೇ ಲಸಿಕೆ ಪಡೆದುಕೊಂಡಿದ್ದಾರೆ. ಮುಂದಿನ ವಾರ ಈ ಕುರಿತು ಜಾಗೃತಿ ಮೂಡಿಸುವ ಅಭಿಯಾನ ನಡೆಸುತ್ತೇವೆ ಎಂದು ತಿಳಿಸಿದರು.

English summary
Karnataka has witnessed a sharp rise in the number of coronavirus cases, with 41,457 new coronavirus cases reported in the state on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X