ಕರ್ನಾಟಕದಲ್ಲಿ ಒಂದೇ ದಿನ 413 ಮಂದಿಗೆ ಕೊರೊನಾವೈರಸ್ ಪಾಸಿಟಿವ್!

ಬೆಂಗಳೂರು, ಫೆಬ್ರವರಿ.21: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಗಳ ಸಂಖ್ಯೆ ಒಂದು ತಹಬದಿಗೆ ಬಂದಿದೆ. ಕಳೆದ 24 ಗಂಟೆಗಳಲ್ಲಿ 413 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 948149ಕ್ಕೆ ಏರಿಕೆಯಾಗಿದೆ.
ಒಂದು ದಿನದಲ್ಲಿ 353 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 2 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೂ 929800 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕು ಹೆಚ್ಚಳ: ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂಗೆ ನಿರ್ಧಾರ
ಭಾನುವಾರದ ಅಂಕಿ-ಅಂಶಗಳ ಪ್ರಕಾರ, 12294 ಮಂದಿ ಕೊರೊನಾವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 6036 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

413 New Coronavirus Cases Reported in Karnataka Today, State Tally Rise to 948149

ಕರ್ನಾಟಕದಲ್ಲಿ 413 ಮಂದಿಗೆ ಕೊರೊನಾ ಪಾಸಿಟಿವ್:
ರಾಜ್ಯದಲ್ಲಿ ಒಟ್ಟು 413 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 5, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು 248, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 4, ಚಿತ್ರದುರ್ಗ 7, ದಕ್ಷಿಣ ಕನ್ನಡ 11, ದಾವಣಗೆರೆ 2, ಧಾರವಾಡ 8, ಗದಗ 2, ಹಾಸನ 4, ಹಾವೇರಿ 0, ಕಲಬುರಗಿ 23, ಕೊಡಗು 3, ಕೋಲಾರ 0, ಕೊಪ್ಪಳ 0, ಮಂಡ್ಯ 1, ಮೈಸೂರು 24, ರಾಯಚೂರು 1, ರಾಮನಗರ 1, ಶಿವಮೊಗ್ಗ 8, ತುಮಕೂರು 6, ಉಡುಪಿ 10, ಉತ್ತರ ಕನ್ನಡ 6, ವಿಜಯಪುರ 10, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+