ಸಿಹಿಸುದ್ದಿ: ಕರ್ನಾಟಕದಲ್ಲಿ 5863 ಕೊರೊನಾ ಸಕ್ರಿಯ ಪ್ರಕರಣಗಳಷ್ಟೇ ಬಾಕಿ

ಬೆಂಗಳೂರು, ಫೆಬ್ರವರಿ.14: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ತಗ್ಗಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿಕೆಯಾಗಿದೆ. ಬೆಂಗಳೂರು ನಗರವನ್ನು ಹೊರತುಪಡಿಸಿ ಉಳಿದ 7 ಜಿಲ್ಲೆಗಳಲ್ಲಿ ಎರಡಂಕಿಯ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ 414 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 945270ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ನಿಂದ ಇಬ್ಬರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12265ಕ್ಕೆ ಏರಿಕೆ ಆಗಿದೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 945270 ಸೋಂಕಿತ ಪ್ರಕರಣಗಳ ಪೈಕಿ 927150 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲೇ 486 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 5836 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

414 New Coronavirus Cases Reported in Karnataka Today, State Tally Rise to 945270

ರಾಜ್ಯದ 22 ಜಿಲ್ಲೆಗಳಲ್ಲಿ ಒಂದಂಕಿ ಕೊವಿಡ್-19 ಪ್ರಕರಣ:
ರಾಜ್ಯದಲ್ಲಿ ಒಟ್ಟು 414 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಅಷ್ಟಾಗಿಯೂ ರಾಜ್ಯ 22 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗಿಂತ ಹೆಚ್ಚಾಗಿಲ್ಲ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು 241, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಚಿತ್ರದುರ್ಗ 6, ದಕ್ಷಿಣ ಕನ್ನಡ 24, ದಾವಣಗೆರೆ 8, ಧಾರವಾಡ 14, ಗದಗ 2, ಹಾಸನ 7, ಹಾವೇರಿ 0, ಕಲಬುರಗಿ 12, ಕೊಡಗು 2, ಕೋಲಾರ 9, ಕೊಪ್ಪಳ 1, ಮಂಡ್ಯ 10, ಮೈಸೂರು 21, ರಾಯಚೂರು 3, ರಾಮನಗರ 0, ಶಿವಮೊಗ್ಗ 0, ತುಮಕೂರು 15, ಉಡುಪಿ 3, ಉತ್ತರ ಕನ್ನಡ 1, ವಿಜಯಪುರ 6, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+