ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

24 ಗಂಟೆಯ ಸುದ್ದಿ: ಕರ್ನಾಟಕದಲ್ಲಿ 415 ಮಂದಿಗೆ ಕೊರೊನಾ ಪಾಸಿಟಿವ್!

|
Google Oneindia Kannada News

ಬೆಂಗಳೂರು, ಫೆಬ್ರವರಿ.10: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ತಗ್ಗಿದೆ. ರಾಜ್ಯದ 21 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿಕೆಯಾಗಿದೆ. ಬೆಂಗಳೂರು ನಗರವನ್ನು ಹೊರತುಪಡಿಸಿ ಉಳಿದ 8 ಜಿಲ್ಲೆಗಳಲ್ಲಿ ಎರಡಂಕಿಯ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 415 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 943627ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ನಿಂದ ಮೂವರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12244ಕ್ಕೆ ಏರಿಕೆ ಆಗಿದೆ.

ಕೊವಿಡ್ 19: ಫೆ.9ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ? ಕೊವಿಡ್ 19: ಫೆ.9ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 943627 ಸೋಂಕಿತ ಪ್ರಕರಣಗಳ ಪೈಕಿ 925489 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲೇ 322 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 5875 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

415 New Coronavirus Cases Reported in Karnataka Today, State Tally Rise to 943627


ರಾಜ್ಯದ 21 ಜಿಲ್ಲೆಗಳಲ್ಲಿ ಒಂದಂಕಿ ಕೊವಿಡ್-19 ಪ್ರಕರಣ:

ರಾಜ್ಯದಲ್ಲಿ ಒಟ್ಟು 415 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಅಷ್ಟಾಗಿಯೂ ರಾಜ್ಯ 21 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗಿಂತ ಹೆಚ್ಚಾಗಿಲ್ಲ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು 208, ಬೀದರ್ 8, ಚಾಮರಾಜನಗರ 3, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 3, ಚಿತ್ರದುರ್ಗ 11, ದಕ್ಷಿಣ ಕನ್ನಡ 16, ದಾವಣಗೆರೆ 9, ಧಾರವಾಡ 2, ಗದಗ 2, ಹಾಸನ 10, ಹಾವೇರಿ 1, ಕಲಬುರಗಿ 14, ಕೊಡಗು 11, ಕೋಲಾರ 2, ಕೊಪ್ಪಳ 0, ಮಂಡ್ಯ 2, ಮೈಸೂರು 45, ರಾಯಚೂರು 1, ರಾಮನಗರ 1, ಶಿವಮೊಗ್ಗ 6, ತುಮಕೂರು 17, ಉಡುಪಿ 6, ಉತ್ತರ ಕನ್ನಡ 3, ವಿಜಯಪುರ 4, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

English summary
415 New Coronavirus Cases Reported in Karnataka Today, State Tally Rise to 943627.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X