ರಾಜ್ಯಸಭಾ ಚುನಾವಣೆ: ಬರೋಬ್ಬರಿ 42 ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿರುವ ಬಿಜೆಪಿ- ಸ್ಪೋಟಕ ಮಾಹಿತಿ ಬಹಿರಂಗ
ಬೆಂಗಳೂರು, ಫೆಬ್ರವರಿ 27: ನಮ್ಮ 42 ಶಾಸಕರನ್ನು ಸಂಪರ್ಕ ಮಾಡಲಾಗಿದೆ. ಆದರೆ, ಎಲ್ಲರೂ ನಮ್ಮ ಜತೆಗೇ ಇದ್ದಾರೆ ಹೀಗಾಗಿ ನಮ್ಮ ಪಕ್ಷದ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಟೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜ್ಯಸಭಾ ಚುನಾವಣೆ ಸಂಬಂಧ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು ಮತ ಚಲಾವಣೆ ಮಾಡುತ್ತಿದ್ದಾರೆ. ಆದರೆ, ಇರುವ ನಾಲ್ಕು ಸ್ಥಾನಕ್ಕೆ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ನಮ್ಮ ಪಕ್ಷದ 42 ಶಾಸಕರನ್ನ ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ನೂ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ಆತಂಕದಲ್ಲಿದ್ದ ಕಾಂಗ್ರೆಸ್ ತನ್ನ ಶಾಸಕರನ್ನ ಸೋಮವಾರ ಸಂಜೆಯೇ ರೆಸಾರ್ಟ್‌ಗೆ ಶಿಫ್ಟ್ ಆಗಿತ್ತು. ಆದರೆ, ಈಗ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕುದುರೆ ವ್ಯಾಪಾರಕ್ಕೆ ಇಳಿಯಲಾಗಿದೆ ಎಂದು ಆರೋಪ ಮಾಡಲಾಗುತ್ತಿದೆ. ಐಟಿ, ಸಿಬಿಐ ಹೆಸರಲ್ಲಿ ಬೆದರಿಕೆಯನ್ನು ಹಾಕಲಾಗುತ್ತಿದೆ ಎಂಬ ಆರೋಪವನ್ನು ಮಾಡಲಾಗಿದೆ. ಅಲ್ಲದೆ, ತಮ್ಮ ಶಾಸಕರನ್ನು ಸಂಪರ್ಕ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ. ಬಿಜೆಪಿಯವರು ತಮ್ಮ ಅಭ್ಯರ್ಥಿ ಗೆಲುವಿಗೆ ಬೇಕಾದ 45 ಮತಗಳನ್ನು ಇಟ್ಟುಕೊಂಡು ಉಳಿದ ಮತಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಬಹುದಿತ್ತು. ಮೈತ್ರಿ ಅಭ್ಯರ್ಥಿ ನಿಲ್ಲಿಸಿದ್ದೆ ಬಿಜೆಪಿ ಬೆಂಬಲದೊಂದಿಗೆ ಅಲ್ಲವೇ? ಬಿಜೆಪಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಲ್ಲವೇ? ಆದರೆ ಬಿಜೆಪಿ ತಮ್ಮ ಪಕ್ಷಕ್ಕೆ 48 ಮತಗಳನ್ನು ತೆಗೆದುಕೊಂಡು, ಜೆಡಿಎಸ್ ಅನ್ನು ಕೈಬಿಟ್ಟಿದ್ದಾರೆ ಎಂದು ತಿಳಿಸಿದರು.
ಸೋಮಶೇಖರ್ ಅವರು ಅಡ್ಡಮತದಾನ ಮಾಡಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದ ಅವರು "ಅಡ್ಡಮತದಾನದ ಬಗ್ಗೆ ನನಗೆ ಗೊತ್ತಿಲ್ಲ. ನಾನು ನನ್ನ ಮತವನ್ನಷ್ಟೇ ನೋಡಿದ್ದೇನೆ. ಪಕ್ಷೇತರರ ಮತವನ್ನು ನಾನು ನೋಡಿಲ್ಲ. ಹೀಗಿರುವಾಗ ಅಡ್ಡಮತದಾನದ ಬಗ್ಗೆ ನನಗೇನು ಗೊತ್ತು? ಬಿಜೆಪಿಯವರನ್ನೇ ಕೇಳಿ. ಅವರೇ ಅಲ್ಲವೇ ಆತ್ಮಸಾಕ್ಷಿ ಮತ ಕೇಳಿದ್ದು" ಎಂದು ತಿಳಿಸಿದರು.
ನಿಮ್ಮ ಪಕ್ಷಕ್ಕೆ ಆತ್ಮಸಾಕ್ಷಿ ಮತ ಬಂದಿದ್ದರೆ ಆ ಶಾಸಕರಿಗೆ ಕಾನೂನಾತ್ಮಕವಾಗಿ ಎದುರಾಗುವ ಸಮಸ್ಯೆಗೆ ರಕ್ಷಣೆ ಇರುತ್ತದೆಯೇ ಎಂದು ಕೇಳಿದಾಗ, "ಸಮಯ ಬರಲಿ, ಮಾತನಾಡೋಣ. ಈಗಲೇ ಎಲ್ಲವೂ ಬೇಡ. ಅಡ್ಡಮತದಾನದ ಬಗ್ಗೆ ಸ್ಪೀಕರ್ ಗೆ ದೂರಿನ ವಿಚಾರವೂ ನನಗೆ ಗೊತ್ತಿಲ್ಲ. ಸೋಮಶೇಖರ್ ಅವರು ಅವರ ಆತ್ಮಸಾಕ್ಷಿಗೆ ತಕ್ಕಂತೆ ಮತ ಹಾಕಿದ್ದಾರೆ. ಈ ಚುನಾವಣೆ ಮೈತಿ ಸರಿಯೋ? ಸರಿಯಲ್ಲವೋ? ಎಂಬ ವಿಚಾರಕ್ಕೆ ಸಂಬಂಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಮತದಾರರು, ಶಾಸಕರು, ಪದವೀಧರರು, ಶಿಕ್ಷಕರು ಒಪ್ಪಬೇಕು. ಶಿಕ್ಷಕರು ಈಗಾಗಲೇ ತಿರಸ್ಕರಿಸಿದ್ದು, ಶಾಸಕರು ಯಾವ ನಿರ್ಧಾರ ತೆಗೆದುಕೊಂಡಿದ್ದಾರೆ ನೋಡೋಣ" ಎಂದರು.
ಸೋಲು ಗೆಲುವು ಮುಖ್ಯವಲ್ಲ, ನಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡಿದ್ದೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ನಮ್ಮ ಸಂಖ್ಯಾಬಲ ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರೆ ಏನಾಗುತ್ತಿತ್ತು ಅಂತಾ ನಮಗೆ ಗೊತ್ತಿದೆ. ನಾವಾಗಿರುವುದಕ್ಕೆ ಸುಮ್ಮನೆ ಇದ್ದೇವೆ. ಈ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ" ಎಂದು ತಿಳಿಸಿದರು.












Click it and Unblock the Notifications