ಆಪರೇಷನ್‌ ಹಸ್ತ; ಸುಮಾರು 42 ಕ್ಕೂ ಹೆಚ್ಚು ನಾಯಕ ಅರ್ಜಿ ನನ್ನ ಮುಂದಿದೆ: ಡಿ ಕೆ ಶಿವಕುಮಾರ್‌ ಹೊಸ ಬಾಂಬ್‌

ಬೆಂಗಳೂರು, ಅಕ್ಟೋಬರ್‌ 12: ಕಾಂಗ್ರೆಸ್ ಸೇರಲು ಕಾಯುತ್ತಿರುವ ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಆ ಹೆಸರುಗಳನ್ನು ಈಗ ಬಹಿರಂಗ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಅನ್ಯ ಪಕ್ಷದ ಮುಖಂಡರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿ ಕೆ ಶಿವಕುಮಾರ್‌ ಮಾತನಾಡಿ, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ತಂದು ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಆ ಹೆಸರುಗಳನ್ನು ಈಗ ಬಹಿರಂಗ ಮಾಡುವುದಿಲ್ಲ ಎಂದರು.

42 leaders of various parties are waiting to join the congress dk shivakumar said

ಸ್ಥಳೀಯ ನಾಯಕರುಗಳ ಜತೆ ಚರ್ಚೆ ಮಾಡಿ, ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ ಎಂದು ಹೇಳಿದರು.

ಕೆಲವರು 2024 ರಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಅದರ ವಿವರಣೆಗೆ ನಾನು ಹೋಗುವುದಿಲ್ಲ. ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ 100ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನನ್ನನ್ನು ಭೇಟಿ ಮಾಡಿ, ನಾವು ʼಇಂಡಿಯಾʼದಲ್ಲಿ ಗುರುತಿಸಿಕೊಂಡಿದ್ದು, ನಿಮ್ಮ ಜೊತೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ. ಬೀದರ್ ನಿಂದ ಚಾಮರಾಜನಗರದ ತನಕ ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ ಎಂದರು.

42 leaders of various parties are waiting to join the congress dk shivakumar said

ಬಿಜೆಪಿ ತಂಡವೊಂದು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರನ್ನು ಭೇಟಿ ಮಾಡುತ್ತಿದೆ. ಈ ಭೇಟಿಯ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಇಂಚಿಂಚೂ ಮಾಹಿತಿ ನೀಡುತ್ತಿದ್ದಾರೆ. ಈ ಬಗ್ಗೆ ಮಾಧ್ಯಮದವರು ಎಷ್ಟೇ ಚರ್ಚೆಗೆ ಎಳೆದರೂ ನಾನು ಏನನ್ನೂ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದೆ. ಬರಗಾಲ ಎದುರಾದಾಗ ವಿದ್ಯುತ್ ಉತ್ಪಾದನೆ ಕುಸಿಯುತ್ತದೆ. ಅಲ್ಲದೇ ಪ್ರತಿವರ್ಷ ಶೇ 10 ರಿಂದ 15 ರಷ್ಟು ಬೇಡಿಕೆ ಹೆಚ್ಚಾಗುವುದು ವಾಡಿಕೆ. ನಮ್ಮ ಸರ್ಕಾರ ಇನ್ನು 10 ಸಾವಿರ ಎಕರೆಯಲ್ಲಿ ಸೋಲಾರ್ ವಿದ್ಯುತ್ ಹಾಗೂ ವಿಂಡ್ ಪವರ್ ಉತ್ಪಾದನೆಗೆ ಕಾರ್ಯಕ್ರಮ ರೂಪಿಸುತ್ತಿದೆ ಎಂದು ತಿಳಿಸಿದರು.

ರೈತರಿಂದಲೂ ವಿದ್ಯುತ್ ಬೇಡಿಕೆ ಪ್ರಮಾಣ ಹೆಚ್ಚಾಗಿದೆ. ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. ಈಗಾಗಲೇ ನಮ್ಮ ಸಚಿವರು ಕಾರ್ಯಪ್ರವೃತ್ತರಾಗಿದ್ದು, ಸಮಸ್ಯೆ ಬಗೆಹರಿಸುತ್ತೇವೆ. ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ಕೇಂದ್ರ ವಿದ್ಯುತ್ ಸಚಿವರ ಬಳಿ ಚರ್ಚೆ ಮಾಡಿ ಕೇಂದ್ರಿಯ ಗ್ರಿಡ್‌ಗಳಿಂದ ವಿದ್ಯುತ್ ಪೂರೈಕೆಗೆ ಮನವಿ ಮಾಡಿದ್ದಾರೆ ಎಂದರು.

ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಮತ್ತೊಮ್ಮೆ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ಮೇಲ್ಮನವಿ ಸಲ್ಲಿಸುತ್ತೇವೆ. ಬೆಂಗಳೂರಿನ ಸುತ್ತಮುತ್ತ ಮಳೆ ಸುರಿದಿರುವ ಪರಿಣಾಮ ಬಿಳಿಗುಂಡ್ಲುವಿಗೆ ಹರಿಯುವ ನೀರಿನ ಪ್ರಮಾಣ ಅಲ್ಪ ಪ್ರಮಾಣದಲ್ಲಿ ಸರಿದೂಗಿದೆ. ಮಳೆ ಸುರಿದಿದ್ದು ಎರಡು ಮೂರು ದಿನ ಮಾತ್ರ. 200 ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, ಸಂಕಷ್ಟದಲ್ಲಿ ಇದ್ದೇವೆ" ಎಂದು ಹೇಳಿದರು.

ಮಹಾರಾಷ್ಟ್ರ ಮತ್ತೆ ಗಡಿ ವಿಚಾರದಲ್ಲಿ ಖ್ಯಾತೆ ತೆಗೆದಿರುವ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ರಾಜ್ಯದಲ್ಲಿ ನಾವು ಮಾಡುತ್ತೇವೆ, ಅವರ ರಾಜ್ಯದಲ್ಲಿ ಅವರು ಮಾಡಲಿ. ಸುಮ್ಮನೆ ಅಶಾಂತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದ್ದು, ನಾವು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+