Breaking: ಕರ್ನಾಟಕದಲ್ಲಿ ಒಂದೇ ದಿನ 4,246 ಮಂದಿಗೆ ಕೊರೊನಾವೈರಸ್!

ಬೆಂಗಳೂರು, ಜನವರಿ 3: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನಕ್ಕೊಂದು ದಾಖಲೆ ಬರೆಯುತ್ತಿವೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 4,200ದ ಗಡಿ ದಾಟಿದ್ದು, ಪಾಸಿಟಿವಿಟಿ ದರ ಶೇ.3.33ರಷ್ಟಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,27,328 ಮಂದಿಗೆ ಕೊರೊನಾವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗಿತ್ತು. ಒಂದೇ ದಿನದಲ್ಲಿ 4,246 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅಂಕಿ-ಅಂಶಗಳ ಕುರಿತು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 3,605 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಭೀತಿ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಭೀತಿ

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 3605 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1272050ಕ್ಕೆ ಏರಿಕೆಯಾಗಿದೆ. 2 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16413ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 14762 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1240874 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 17,003 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,10,325 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು1,27,328 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 1,07,55,540 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 4,62,43,921 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 5,69,99,461 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟಿದೆ ಕೊವಿಡ್-19 ಪ್ರಕರಣ

ಯಾವ ಜಿಲ್ಲೆಯಲ್ಲಿ ಎಷ್ಟಿದೆ ಕೊವಿಡ್-19 ಪ್ರಕರಣ

ರಾಜ್ಯದಲ್ಲಿ ಒಟ್ಟು 1290 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 6, ಬಳ್ಳಾರಿ 34, ಬೆಳಗಾವಿ 31, ಬೆಂಗಳೂರು ಗ್ರಾಮಾಂತರ 19 ಬೆಂಗಳೂರು 3605, ಬೀದರ್ 3, ಚಾಮರಾಜನಗರ 2, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 12, ಚಿತ್ರದುರ್ಗ 6, ದಕ್ಷಿಣ ಕನ್ನಡ 111, ದಾವಣಗೆರೆ 3, ಧಾರವಾಡ 26, ಗದಗ 5, ಹಾಸನ 20, ಹಾವೇರಿ 0, ಕಲಬುರಗಿ 28, ಕೊಡಗು 20, ಕೋಲಾರ 24, ಕೊಪ್ಪಳ 0, ಮಂಡ್ಯ 36, ಮೈಸೂರು 59, ರಾಯಚೂರು 0, ರಾಮನಗರ 4, ಶಿವಮೊಗ್ಗ 22, ತುಮಕೂರು 43, ಉಡುಪಿ 88, ಉತ್ತರ ಕನ್ನಡ 17, ವಿಜಯಪುರ 14, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಕರ್ನಾಟಕದಲ್ಲಿ ಯಾವ ರೂಪಾಂತರಿ ಸೋಂಕು ಹೆಚ್ಚು?

ಕರ್ನಾಟಕದಲ್ಲಿ ಯಾವ ರೂಪಾಂತರಿ ಸೋಂಕು ಹೆಚ್ಚು?

ಕೊರೊನಾವೈರಸ್ ಸೋಂಕಿನ ಯಾವ ರೂಪಾಂತರಿಯು ಹೆಚ್ಚು ಹರಡುತ್ತಿದೆ ಎಂಬುದನ್ನು ಮುಂದೆ ಪಟ್ಟಿ ಮಾಡಲಾಗಿದೆ:

ಅಲ್ಫಾ/ B.1.1.7 - 156

ಬೀಟಾ/ B.1.351 - 08

ಡೆಲ್ಟಾ / B.1.617.2 - 2937

ಡೆಲ್ಟಾ ಪ್ಲಸ್ - 1350

ಕಪ್ಪಾ / B.1.617.1 - 160

ETA / B.1.525 - 01

ಓಮಿಕ್ರಾನ್/ B.1.1.529 - 226

Recommended Video

      Jaspreet Bumrah ಅವರು ಸಿಟ್ಟಿನಿಂದ 6 ಹೊಡೆದಿದ್ದು ಹೇಗೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+