ಕರ್ನಾಟಕದ 25 ಜಿಲ್ಲೆಗಳಲ್ಲಿ ಒಂದಂಕಿ ಕೊರೊನಾವೈರಸ್ ಕೇಸ್!

ಬೆಂಗಳೂರು, ಮಾರ್ಚ್.08: ಕರ್ನಾಟಕದಲ್ಲಿ ಪ್ರತಿನಿತ್ಯ 600ರ ಗಡಿ ದಾಟುತ್ತಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 436 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಮಹಾಮಾರಿ ಕೊರೊನಾವೈರಸ್ ಸೋಂಕಿಗೆ ಐವರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12367ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 478 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈವರೆಗೂ 936250 ಸೋಂಕಿತರಿಗೆ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 955451 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 6815 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

436 New Coronavirus Cases Reported in Karnataka Today, State Tally Rise to 955451

ರಾಜ್ಯದಲ್ಲಿ ಜಿಲ್ಲಾವಾರು ಕೊರೊನಾವೈರಸ್:

ರಾಜ್ಯದಲ್ಲಿ ಒಟ್ಟು 436 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು 287, ಬೀದರ್ 7, ಚಾಮರಾಜನಗರ 1, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 6, ದಕ್ಷಿಣ ಕನ್ನಡ 14, ದಾವಣಗೆರೆ 1, ಧಾರವಾಡ 9, ಗದಗ 5, ಹಾಸನ 5, ಹಾವೇರಿ 0, ಕಲಬುರಗಿ 22, ಕೊಡಗು 2, ಕೋಲಾರ 9, ಕೊಪ್ಪಳ 1, ಮಂಡ್ಯ 3, ಮೈಸೂರು 7, ರಾಯಚೂರು 1, ರಾಮನಗರ 0, ಶಿವಮೊಗ್ಗ 3, ತುಮಕೂರು 12, ಉಡುಪಿ 18, ಉತ್ತರ ಕನ್ನಡ 4, ವಿಜಯಪುರ 3, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+