24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಕೊರೊನಾ ಸಂಖ್ಯೆ "0"!
ಬೆಂಗಳೂರು, ಫೆಬ್ರವರಿ.16: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಒಂದೇ ಒಂದು ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಂದೇ ದಿನ 438 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 946076ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 344 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 927924 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾವೈರಸ್ ಸೋಂಕಿನಿಂದ ಒಂದು ದಿನದಲ್ಲಿ ಆರು ಮಂದಿ ಪ್ರಾಣ ಬಿಟ್ಟಿದ್ದು, ರಾಜ್ಯದಲ್ಲಿ ಈವರೆಗೂ ಮಹಾಮಾರಿಗೆ 12273 ಜನರು ಬಲಿಯಾಗಿದ್ದಾರೆ. ಉಳಿದಂತೆ ಕರ್ನಾಟಕದಲ್ಲಿ 5860 ಕೊವಿಡ್-19 ಸಕ್ರಿಯ ಪ್ರಕರಣಗಳಿರುವುದು ಗೊತ್ತಾಗಿದೆ.

ಏಳು ಜಿಲ್ಲೆಗಳಲ್ಲಿ "ಶೂನ್ಯ" ಪ್ರಕರಣಗಳು ಪತ್ತೆ:
ರಾಜ್ಯದಲ್ಲಿ ಒಟ್ಟು 438 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿಲ್ಲ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು 306, ಬೀದರ್ 4, ಚಾಮರಾಜನಗರ 1, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 9, ಚಿತ್ರದುರ್ಗ 11, ದಕ್ಷಿಣ ಕನ್ನಡ 19, ದಾವಣಗೆರೆ 2, ಧಾರವಾಡ 2, ಗದಗ 0, ಹಾಸನ 6, ಹಾವೇರಿ 2, ಕಲಬುರಗಿ 9, ಕೊಡಗು 4, ಕೋಲಾರ 2, ಕೊಪ್ಪಳ 0, ಮಂಡ್ಯ 1, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 8, ಉಡುಪಿ 11, ಉತ್ತರ ಕನ್ನಡ 7, ವಿಜಯಪುರ 5, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications