Land: ವಾಯುಪಡೆಯಿಂದ ಬೆಂಗಳೂರಿನ 444 ಎಕರೆ ಅರಣ್ಯ ಪ್ರದೇಶ ಸರ್ಕಾರದ ವ್ಯಾಪ್ತಿಗೆ: ಸಚಿವ ಈಶ್ವರ್ ಖಂಡ್ರೆ
Land: ಬೆಂಗಳೂರು ಉತ್ತರ ತಾಲ್ಲೂಕಿನ ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆಯಲು ಕರ್ನಾಟಕ ಅರಣ್ಯ ಕಾಯಿದೆ, 1963ರ ಸೆಕ್ಷನ್ 64ಎ ಅಡಿ ತಕ್ಷಣ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿದ್ದೇನೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ.
ಈ ಭೂಮಿಯನ್ನು ಮೂಲತಃ ವಾಯುಪಡೆಗೆ ಮಂಜೂರು ಮಾಡಲಾಗಿದ್ದರೂ, ರಾಜ್ಯ ಸರ್ಕಾರವು 2017ರ ಅಕ್ಟೋಬರ್ 9ರಂದು ಆ ಮಂಜೂರಾತಿಯನ್ನು ರದ್ದುಗೊಳಿಸಿದೆ. ಪರಿಸರದ ದೃಷ್ಟಿಯಿಂದ ಈ ಪ್ರದೇಶವನ್ನು ಪ್ರಮುಖ ಶ್ವಾಸತಾಣ (lung space) ಆಗಿ ಉಳಿಸುವುದು ಅಗತ್ಯವಾಗಿದ್ದು, ಯಾವುದೇ ವಿಳಂಬವಿಲ್ಲದೆ ತೆರವು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹಿತದ ದೃಷ್ಟಿಯಿಂದ ಮಂಜೂರಾತಿ ರದ್ದಾದ ಬಳಿಕವೂ, ಅಗತ್ಯ ನಿಯಮಾನುಸಾರ ಅರ್ಜಿ ಸಲ್ಲಿಸದೆ ಭೂಮಿಯನ್ನು ಬಳಸುತ್ತಿರುವುದು ಗಂಭೀರ ವಿಷಯ. ಆದ್ದರಿಂದ ಸೆಕ್ಷನ್ 64ಎ ನೋಟಿಸ್ ಜಾರಿ ಮಾಡಿ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಈ ಜಮೀನಿಗೆ ವಾಯುಪಡೆಯೊಂದಿಗೆ ಯಾವುದೇ ಹಕ್ಕು ಸಂಬಂಧವಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ. ಇನ್ನು ಮುಂದೆ ಈ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕಾದರೆ, ಅರಣ್ಯ (ಸಂರಕ್ಷಣಾ) ಕಾಯ್ದೆ-1980 ಅನ್ವಯ ಪರಿವೇಶ್ ಪೋರ್ಟಲ್ ಮೂಲಕ ಅನುಮತಿ ಪಡೆಯುವುದು ಕಡ್ಡಾಯ ಎಂದು ಎಲ್ಲಾ ಇಲಾಖೆಗಳಿಗೂ ಸೂಚಿಸಲಾಗಿದೆ. ಅರಣ್ಯ ಸಂರಕ್ಷಣೆ ನಮ್ಮ ಜವಾಬ್ದಾರಿ - ಪರಿಸರ ರಕ್ಷಣೆ ನಮ್ಮ ಬದ್ಧತೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಆದೇಶದಲ್ಲಿ ಏನಿದೆ
ರಾಜ್ಯ ಸರ್ಕಾರವು ದಿನಾಂಕ 09.10.2017ರ G.O. No.RD 228 LGB 2017ರ ಮೂಲಕ ವಾಯುಪಡೆಗೆ ಬೆಂಗಳೂರು ಉತ್ತರ ತಾಲ್ಲೂಕು, ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದಲ್ಲಿ (452Ac.-4%gu) ನೀಡಲಾದ ಭೂ ಮಂಜೂರಾತಿಯನ್ನು ರದ್ದುಗೊಳಿಸಿದ್ದು, ಈ ಜಮೀನು ಅರಣ್ಯ ಇಲಾಖೆಯ ಹೆಸರಿಗೆ ಇಂಡೀಕರಣ ಆಗಿರುತ್ತದೆ. ಅಲ್ಲದೆ ಈ ಜಮೀನು ಅರಣ್ಯವೇ ಆಗಿರುತ್ತದೆ. ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಶ್ವತ ತಾಣವಾಗಿ ಉಳಿಸುವುದು ಅರಣ್ಯ ಇಲಾಖೆ ಉದ್ದೇಶವಾಗಿದೆ.
ಈ ಜಮೀನಿಗೂ ವಾಯುಪಡೆಗೂ ಯಾವುದೇ ಸಂಬಂಧ ಇರುವುದಿಲ್ಲ. ಹೀಗಾಗಿ ಕರ್ನಾಟಕ ಅರಣ್ಯ ಕಾಯಿದೆ ಸೆಕ್ಷನ್ 64 ಎ ಅಡಿ ಪ್ರಕ್ರಿಯೆ ನಡೆಸಲು ನಿರ್ದೇಶಿಸಲಾಗಿದ್ದು, ಇನ್ನು ಮುಂದೆ ಈ ಪ್ರದೇಶದಲ್ಲಿ ಅನಿವಾರ್ಯವಾಗಿ ಯಾವುದೇ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಾಗ ನಿಯಮಾನುಸಾರ ಅರಣ್ಯ ಇಲಾಖೆಯಿಂದ (ಪರಿವೇಶ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ) ಅನುಮತಿ ಪಡೆಯುವಂತೆ ಸುತ್ತೋಲೆ ಹೊರಡಿಸಲು ಮತ್ತು ಎಲ್ಲ ಇಲಾಖೆಗಳಿಗೂ ಮಾಹಿತಿ ನೀಡಲು ಕ್ರಮ ವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಸಾರ್ವಜನಿಕರು ಹೇಳಿದ್ದೇನು
ಇನ್ನು ಈ ಆದೇಶಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಅರಣ್ಯ ಇರುವಾಗ ಅದೇ ಪ್ರಮುಖ ಗಾಳಿ ನೀಡುವ (lung space) ಪ್ರದೇಶವಾಗುತ್ತದೆ. ರಾಜ್ಯ ಸರ್ಕಾರದ ವ್ಯಾಪ್ತಿಗೆ ಬಂದರೆ, ಒಂದೊಂದು ಸರ್ಕಾರ ಬಂದು ಹೋದಂತೆಲ್ಲ ಹತ್ತಿಪ್ಪತ್ತು ಎಕರೆಗಳನ್ನು ರಿಯಲ್ ಎಸ್ಟೇಟ್ ರಾಜಕಾರಣಿಗಳು ನುಂಗುತ್ತಾರೆ. ವಾಯುಪಡೆ ಅಧೀನದಲ್ಲಿ ಇದ್ದರೆ ಆಗ ನೆಲವನ್ನು ಮುಟ್ಟುವ ಧೈರ್ಯ ಯಾರಿಗೂ ಇರುವುದಿಲ್ಲ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಸಹ ನನ್ನಂತಹ ಶ್ರೀಸಾಮಾನ್ಯರಿಗೆ ರಾಜಕಾರಣಿಗಳಿಗಿಂತ ನಮ್ಮ ದೇಶದ ಸೇನೆಯ ಮೇಲೆ ಹೆಚ್ಚಿನ ನಂಬಿಕೆಯಿದೆ ಎಂದು ಸಿ.ಎಸ್.ಲಕ್ಷ್ಮಿಶಾ ಎನ್ನುವವರು ಹೇಳಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications