ಕರ್ನಾಟಕದಲ್ಲಿ 24 ಗಂಟೆಗಳಲ್ಲೇ 44631 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಮೇ 4: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಮಿತಿ ಮೀರುತ್ತಿದೆ. ಕಳೆದ 24 ಗಂಟೆಗಳಲ್ಲಿ 44631 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿನಿಂದ 292 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 24714 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1690934 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಈವರೆಗೂ 12,10,013 ಸೋಂಕಿತರು ಗುಣಮುಖರಾಗಿದ್ದು, 16,538 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 4,64,363 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ:
ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ 20870 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 8,40,274ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 132 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 6845ಕ್ಕೆ ಏರಿಕೆಯಾಗಿದೆ. 3,01,712 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆವಾರು ಕೊರೊನಾವೈರಸ್ ಪ್ರಕರಣ?:
ರಾಜ್ಯದಲ್ಲಿ ಒಟ್ಟು 44631 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 676, ಬಳ್ಳಾರಿ 1280, ಬೆಳಗಾವಿ 615, ಬೆಂಗಳೂರು ಗ್ರಾಮಾಂತರ 996, ಬೆಂಗಳೂರು 20870, ಬೀದರ್ 403, ಚಾಮರಾಜನಗರ 528, ಚಿಕ್ಕಬಳ್ಳಾಪುರ 639, ಚಿಕ್ಕಮಗಳೂರು 735, ಚಿತ್ರದುರ್ಗ 215, ದಕ್ಷಿಣ ಕನ್ನಡ 985, ದಾವಣಗೆರೆ 277, ಧಾರವಾಡ 647, ಗದಗ 191, ಹಾಸನ 2278, ಹಾವೇರಿ 408, ಕಲಬುರಗಿ 1162, ಕೊಡಗು 743, ಕೋಲಾರ 600, ಕೊಪ್ಪಳ 585, ಮಂಡ್ಯ 1506, ಮೈಸೂರು 2293, ರಾಯಚೂರು 817, ರಾಮನಗರ 529, ಶಿವಮೊಗ್ಗ 803, ತುಮಕೂರು 1636, ಉಡುಪಿ 556, ಉತ್ತರ ಕನ್ನಡ 822, ವಿಜಯಪುರ 379, ಯಾದಗಿರಿ 457 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications