ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 5,000ಕ್ಕಿಂತ ಕಡಿಮೆ ಕೊರೊನಾವೈರಸ್ ಪ್ರಕರಣ!

|
Google Oneindia Kannada News

ಬೆಂಗಳೂರು, ಮೇ 20: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 5,000ಕ್ಕಿಂತ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 2.58ರಷ್ಟಿದ್ದು, ಸಾವಿನ ಪ್ರಮಾಣ ಶೇ.2.65ರಷ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 120 ಮಂದಿ ಕೊವಿಡ್-19 ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಈವರೆಗೂ 33883 ಮಂದಿ ಮಹಾಮಾರಿಯಿಂದ ಮೃತಪಟ್ಟಿದ್ದಾರೆ. ಒಂದು ದಿನದಲ್ಲಿ 4517 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 8456 ಸೋಂಕಿತರು ಗುಣಮುಖರಾಗಿದ್ದಾರೆ.

ಕೋವಿಡ್19: ಜೂನ್ 20ರಂದು ಜಾಗತಿಕವಾಗಿ ಎಷ್ಟು ಮಂದಿ ಗುಣಮುಖ
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,06,453ಕ್ಕೆ ಏರಿಕೆಯಾಗಿದೆ. ಈವರೆಗೂ 26,45,735 ಸೋಂಕಿತರು ಗುಣಮುಖರಾಗಿದ್ದು. 1,26,813 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

4517 New Coronavirus Cases Reported in Karnataka Today, State Tally Rise to 2806453

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 1,000ಕ್ಕಿಂತ ಕಡಿಮೆಯಾಗಿದೆ. ಕಳೆದ ಒಂದು ದಿನದಲ್ಲಿ 933 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,05,259ಕ್ಕೆ ಏರಿಕೆಯಾಗಿದೆ. 12 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,445ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 43,869 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,30,652 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,74,521 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 58,50,096 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,68,89,443 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,27,39,539 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 4517 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 10, ಬಳ್ಳಾರಿ 67, ಬೆಳಗಾವಿ 201, ಬೆಂಗಳೂರು ಗ್ರಾಮಾಂತರ 111, ಬೆಂಗಳೂರು 933, ಬೀದರ್ 6, ಚಾಮರಾಜನಗರ 61, ಚಿಕ್ಕಬಳ್ಳಾಪುರ 123, ಚಿಕ್ಕಮಗಳೂರು 183, ಚಿತ್ರದುರ್ಗ 74, ದಕ್ಷಿಣ ಕನ್ನಡ 525, ದಾವಣಗೆರೆ 136, ಧಾರವಾಡ 77, ಗದಗ 28, ಹಾಸನ 346, ಹಾವೇರಿ 24, ಕಲಬುರಗಿ 9, ಕೊಡಗು 137, ಕೋಲಾರ 77, ಕೊಪ್ಪಳ 61, ಮಂಡ್ಯ 131, ಮೈಸೂರು 545, ರಾಯಚೂರು 19, ರಾಮನಗರ 12, ಶಿವಮೊಗ್ಗ 141, ತುಮಕೂರು 144, ಉಡುಪಿ 167, ಉತ್ತರ ಕನ್ನಡ 146, ವಿಜಯಪುರ 7, ಯಾದಗಿರಿ 16 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

ಎಚ್ಚರ!! ರಾಜ್ಯದ 3 ಲಕ್ಷಕ್ಕಿಂತ ಅಧಿಕ ಮಕ್ಕಳು ಕೊರೊನಾ ಮೂರನೇ ಅಲೆಯ ಟಾರ್ಗೆಟ್! | Oneindia Kannada
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಮೇ 1ರಿಂದ ಈವರೆಗೂ 36,86,562 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ಮೊದಲ ಡೋಸ್ ನೀಡಲಾಗಿದ್ದು, 29,637 ಜನರಿಗೆ 2ನೇ ಡೋಸ್ ಲಸಿಕೆ ವಿತರಿಸಲಾಗಿದೆ. ರಾಜ್ಯದಲ್ಲಿ ಈವರೆಗೂ 7,43,853 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,89,224 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 7,39,932 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,35,772 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,00,59,335 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 24,68,580 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
4517 New Coronavirus Cases Reported in Karnataka Today, State Tally Rise to 2806453.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X