ಕರ್ನಾಟಕದಲ್ಲಿ ಕೊರೊನಾವೈರಸ್ ಹಳೆಯ ದಾಖಲೆಗಳು ಪೀಸ್ ಪೀಸ್!

ಬೆಂಗಳೂರು, ಏಪ್ರಿಲ್ 04: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಣವನ್ನು ಮೀರಿ ಏರಿಕೆಯಾಗುತ್ತಿದೆ. ಕಳೆದ ಆರು ತಿಂಗಳ ನಂತರ ಮೊದಲ ಬಾರಿಗೆ ಒಂದೇ ದಿನ 4500ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

Recommended Video

      #Covid19Update: ಇಂದು ರಾಜ್ಯದಲ್ಲಿ 4553 ಕೊರೊನಾ ಕೇಸ್‌ ದಾಖಲು! | Oneindia Kannada

      ರಾಜ್ಯದಲ್ಲಿ 24 ಗಂಟೆಗಳಲ್ಲಿ 4553 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 15 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 2060 ಸೋಂಕಿತರು ಗುಣಮುಖರಾಗಿದ್ದಾರೆ.

      ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1015155ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 963419 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12625 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 39092 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

      4553 New Coronavirus Cases Reported in Karnataka Today, State Tally Rise to 1015155

      ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

      ರಾಜ್ಯದಲ್ಲಿ ಒಟ್ಟು 4553 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 20, ಬಳ್ಳಾರಿ 93, ಬೆಳಗಾವಿ 52, ಬೆಂಗಳೂರು ಗ್ರಾಮಾಂತರ 155, ಬೆಂಗಳೂರು 2787, ಬೀದರ್ 147, ಚಾಮರಾಜನಗರ 15, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 17, ಚಿತ್ರದುರ್ಗ 29, ದಕ್ಷಿಣ ಕನ್ನಡ 83, ದಾವಣಗೆರೆ 23, ಧಾರವಾಡ 100, ಗದಗ 18, ಹಾಸನ 104, ಹಾವೇರಿ 7, ಕಲಬುರಗಿ 170, ಕೊಡಗು 14, ಕೋಲಾರ 20, ಕೊಪ್ಪಳ 10, ಮಂಡ್ಯ 79, ಮೈಸೂರು 260, ರಾಯಚೂರು 23, ರಾಮನಗರ 18, ಶಿವಮೊಗ್ಗ 36, ತುಮಕೂರು 107, ಉಡುಪಿ 73, ಉತ್ತರ ಕನ್ನಡ 49, ವಿಜಯಪುರ 16, ಯಾದಗಿರಿ 18 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+