ಕರ್ನಾಟಕದ 10 ಜಿಲ್ಲೆಗಳಲ್ಲಿ ಶೂನ್ಯ ಕೊರೊನಾ ಪ್ರಕರಣಗಳು

ಬೆಂಗಳೂರು,ಜನವರಿ 30: ಕರ್ನಾಟಕದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ರಾಜ್ಯದ 10 ಜಿಲ್ಲೆಗಳಲ್ಲಿ ಶೂನ್ಯ ಕೊರೊನಾ ಪ್ರಕರಣಗಳು ದಾಖಲಾಗಿವೆ.ಇಂದು 464 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,38,865ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,213ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Corona

ರಾಜ್ಯದಲ್ಲಿ ಇಂದು 547 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,20,657ಕ್ಕೆ ಏರಿಕೆಯಾಗಿದೆ. ಇನ್ನು 5,976 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 147 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 233 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,98,644ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+