ಕೊರೊನಾ ಸೈರನ್; ಇದು ಕನ್ನಡಿಗರು ಎಚ್ಚೆತ್ತುಕೊಳ್ಳಬೇಕಾದ ಸಮಯ!

ಬೆಂಗಳೂರು, ಏಪ್ರಿಲ್ 30: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಕರ್ನಾಟಕಕ್ಕೆ ಇಡೀ ಕರ್ನಾಟಕವೇ ತತ್ತರಿಸಿ ಹೋಗಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರವು ಕೊವಿಡ್-19 ಮಹಾಮಾರಿಯಿಂದ ತಲ್ಲಣಗೊಂಡಿದೆ.

ರಾಜ್ಯದಲ್ಲಿ ಒಂದೇ ದಿನ 48296 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 217 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 14,884 ಸೋಂಕಿತರು ಗುಣಮುಖರಾಗಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 1523142 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 11,24,909 ಸೋಂಕಿತರು ಗುಣಮುಖರಾಗಿದ್ದು, 3,82,690 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿನ ತಪಾಸಣೆ ಸಂಖ್ಯೆ

ರಾಜ್ಯದಲ್ಲಿ ಕೊವಿಡ್-19 ಸೋಂಕಿನ ತಪಾಸಣೆ ಸಂಖ್ಯೆ

ಕೊರೊನಾವೈರಸ್ ಸೋಂಕಿನ ಪತ್ತೆಗೆ ಎರಡು ವಿಧಾನಗಳಲ್ಲಿ ಮಾದರಿಗಳ ತಪಾಸಣೆ ನಡೆಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14280 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದ್ದು, 1,75,513 ಜನರಿಗೆ RT-PCR ತಪಾಸಣೆ ನಡೆಸಲಾಗಿದೆ. ಒಟ್ಟು 1,89,793 ಜನರಿಗೆ ಕೊರೊನಾವೈರಸ್ ಸೋಂಕಿತ ತಪಾಸಣೆ ನಡೆಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ 26 ಸಾವಿರದ ಗಡಿ ದಾಟಿದ ಕೊರೊನಾ

ಸಿಲಿಕಾನ್ ಸಿಟಿಯಲ್ಲಿ 26 ಸಾವಿರದ ಗಡಿ ದಾಟಿದ ಕೊರೊನಾ

ಕರ್ನಾಟಕದಲ್ಲಿ ಪತ್ತೆಯಾದ ಒಟ್ಟು ಹೊಸ ಪ್ರಕರಣಗಳ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಬೆಂಗಳೂರಿನಲ್ಲೇ ದೃಢಪಟ್ಟಿವೆ. ಒಂದು ದಿನದಲ್ಲಿ ಸಿಲಿಕಾನ್ ಸಿಟಿಯಲ್ಲೇ 26756 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಹಾಮಾರಿಗೆ 93 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 6375ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯೊಂದರಲ್ಲೇ 2,59,058 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ

ರಾಜ್ಯದಲ್ಲಿ ಒಟ್ಟು 48296 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 234, ಬಳ್ಳಾರಿ 1282, ಬೆಳಗಾವಿ 514, ಬೆಂಗಳೂರು ಗ್ರಾಮಾಂತರ 818, ಬೆಂಗಳೂರು 26756, ಬೀದರ್ 447, ಚಾಮರಾಜನಗರ 474, ಚಿಕ್ಕಬಳ್ಳಾಪುರ 579, ಚಿಕ್ಕಮಗಳೂರು 542, ಚಿತ್ರದುರ್ಗ 144, ದಕ್ಷಿಣ ಕನ್ನಡ 1205, ದಾವಣಗೆರೆ 438, ಧಾರವಾಡ 703, ಗದಗ 122, ಹಾಸನ 709, ಹಾವೇರಿ 90, ಕಲಬುರಗಿ 1256, ಕೊಡಗು 609, ಕೋಲಾರ 845, ಕೊಪ್ಪಳ 256, ಮಂಡ್ಯ 1348, ಮೈಸೂರು 3500, ರಾಯಚೂರು 733, ರಾಮನಗರ 286, ಶಿವಮೊಗ್ಗ 673, ತುಮಕೂರು 1801, ಉಡುಪಿ 660, ಉತ್ತರ ಕನ್ನಡ 426, ವಿಜಯಪುರ 521, ಯಾದಗಿರಿ 325 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ಅನುಷ್ಕ ಗಾಗಿ ರೊಮ್ಯಾಂಟಿಕ್ ಹಾಡು ಹಾಡಿದ ವಿರಾಟ್ ಕೊಹ್ಲಿ | Oneindia Kannada
    ರಾಜ್ಯದಲ್ಲಿ ಒಟ್ಟು 95 ಲಕ್ಷ ಜನರಿಗೆ ಕೊರೊನಾ ಲಸಿಕೆ

    ರಾಜ್ಯದಲ್ಲಿ ಒಟ್ಟು 95 ಲಕ್ಷ ಜನರಿಗೆ ಕೊರೊನಾ ಲಸಿಕೆ

    ಕರ್ನಾಟಕದಲ್ಲಿ ಈವರೆಗೂ 95,81,682 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ರಾಜ್ಯದಲ್ಲಿ 6,76,497 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,30,652 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 3,77,151 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,45,147 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷದಿಂದ 60 ವರ್ಷದವರೆಗಿನ 34,99,655 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,52,070 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 34,97,513 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,02,970 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+