ಕರ್ನಾಟಕದಲ್ಲಿ 1 ಗಂಟೆಗೆ 2,000ಕ್ಕೂ ಹೆಚ್ಚು ಕೊರೊನಾ ಪ್ರಕರಣ!
ಬೆಂಗಳೂರು, ಮೇ 07: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗಿದೆ. ಪ್ರತಿನಿತ್ಯ 40 ಸಾವಿರಕ್ಕೂ ಅಧಿಕ ಕೊವಿಡ್-19 ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗುತ್ತಿವೆ.
ಕಳೆದ 24 ಗಂಟೆಗಳಲ್ಲೇ 48781 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ ಕೊವಿಡ್-19 ಸೋಂಕಿನಿಂದ 592 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 28623 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1838885 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 12,84,420 ಸೋಂಕಿತರು ಗುಣಮುಖರಾಗಿದ್ದು, 17,804ಕ್ಕೆ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 5,36,641 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ:
ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ 21376 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 9,08,462ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 346 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 7491ಕ್ಕೆ ಏರಿಕೆಯಾಗಿದೆ. 3,41,978 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆವಾರು ಕೊರೊನಾವೈರಸ್ ಪ್ರಕರಣ?:
ರಾಜ್ಯದಲ್ಲಿ ಒಟ್ಟು 48781 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 661, ಬಳ್ಳಾರಿ 1284, ಬೆಳಗಾವಿ 965, ಬೆಂಗಳೂರು ಗ್ರಾಮಾಂತರ 959, ಬೆಂಗಳೂರು 21376, ಬೀದರ್ 437, ಚಾಮರಾಜನಗರ 725, ಚಿಕ್ಕಬಳ್ಳಾಪುರ 734, ಚಿಕ್ಕಮಗಳೂರು 632, ಚಿತ್ರದುರ್ಗ 126, ದಕ್ಷಿಣ ಕನ್ನಡ 1633, ದಾವಣಗೆರೆ 538, ಧಾರವಾಡ 942, ಗದಗ 248, ಹಾಸನ 2422, ಹಾವೇರಿ 214, ಕಲಬುರಗಿ 1722, ಕೊಡಗು 622, ಕೋಲಾರ 828, ಕೊಪ್ಪಳ 523, ಮಂಡ್ಯ 1110, ಮೈಸೂರು 2246, ರಾಯಚೂರು 762, ರಾಮನಗರ 501, ಶಿವಮೊಗ್ಗ 563, ತುಮಕೂರು 3040, ಉಡುಪಿ 976, ಉತ್ತರ ಕನ್ನಡ 833, ವಿಜಯಪುರ 445, ಯಾದಗಿರಿ 714 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications