ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಒಟ್ಟು ಅಭ್ಯರ್ಥಿಗಳೆಷ್ಟು ಗೊತ್ತಾ?

ಬೆಂಗಳೂರು, ಏಪ್ರಿಲ್‌ 21: ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯದ ಒಟ್ಟು 224 ಕ್ಷೇತ್ರಗಳಿಂದ ಎಷ್ಟು ಅಭ್ಯರ್ಥಿಗಳಿಂದ ಎಷ್ಟು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂಬ ಮಾಹಿತಿ ಬಹಿರಂಗವಾಗಿದೆ. ಪ್ರಸಕ್ತ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿತ್ತು.

ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ 3,600 ಅಭ್ಯರ್ಥಿಗಳು ಒಟ್ಟು 5,102 ನಾಮಪತ್ರಗಳನ್ನು ಸಲ್ಲಿಸಿದ್ದು, ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಶುಕ್ರವಾರ ದಾಖಲೆಗಳನ್ನು ಪರಿಶೀಲಿಸಲಾಗುವುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

5,102 Nomination Papers Submitted and 3,600 Contesting Candidates for Karnataka Assembly Elections

ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿತ್ತು. ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಒಟ್ಟು ನಾಮಪತ್ರಗಳಲ್ಲಿ 3,327 ಪುರುಷ ಅಭ್ಯರ್ಥಿಗಳಿಂದ 4,710 ಮತ್ತು 304 ಮಹಿಳಾ ಅಭ್ಯರ್ಥಿಗಳಿಂದ 391 ನಾಮಪತ್ರಗಳು ಸಲ್ಲಿಕೆಯಾಗಿವೆ. ಮಂಗಳಮುಖಿ ಅಭ್ಯರ್ಥಿಯಿಂದ ಒಂದು ನಾಮಪತ್ರವನ್ನು ಸಲ್ಲಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ. 707 ನಾಮಪತ್ರಗಳನ್ನು ಬಿಜೆಪಿಯೊಂದಿಗೆ ಗುರುತಿಸಿಕೊಂಡ ಅಭ್ಯರ್ಥಿಗಳು, 651 ಕಾಂಗ್ರೆಸ್, 455 ಜೆಡಿಎಸ್ (ಎಸ್) ಮತ್ತು ಉಳಿದವರು ಇತರ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣಾ ಆಯೋಗದ ಪ್ರಕಾರ, ಒಬ್ಬ ಅಭ್ಯರ್ಥಿ ನಾಲ್ಕು ನಾಮಪತ್ರಗಳನ್ನು ಸಲ್ಲಿಸಬಹುದು. ನಾಮಪತ್ರ ಸಲ್ಲಿಕೆಗೆ ಆರನೇ ಮತ್ತು ಕೊನೆಯ ದಿನವಾದ ಗುರುವಾರ ಹಲವು ಪ್ರಮುಖ ನಾಯಕರು ಸೇರಿದಂತೆ 1,691 ಅಭ್ಯರ್ಥಿಗಳಿಂದ 1,934 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರು ಕನಕಪುರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದು, ಅವರ ಹಿರಿಯ ಸಹೋದರ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಅವರು ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಆದರೆ ಈಗ ಡಿಕೆಶಿ ಅವರ ನಾಮಪತ್ರ ಅಂಗೀಕಾರವಾಗಿದ್ದು, ಸುರೇಶ್ ಅವರು ನಾಮಪತ್ರ ಹಿಂತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.

ಹಲವಾರು ಕಾಂಗ್ರೆಸ್ ಪದಾಧಿಕಾರಿಗಳ ಪ್ರಕಾರ, ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಸಂದರ್ಭದಲ್ಲಿ ಸುರೇಶ್ ಅವರು "ಬ್ಯಾಕಪ್ ಪ್ಲಾನ್" ಆಗಿ ತಮ್ಮ ಪತ್ರಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿತ್ತು. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್‌ಪಿ ಸ್ವರೂಪ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಕುಟುಂಬದವರ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಬುಧವಾರ ರಾತ್ರಿ ಪಕ್ಷದಿಂದ ಟಿಕೆಟ್ ಘೋಷಣೆಯಾಗಿದ್ದು, ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಹಿರಿಯ ಮುಖಂಡ ಮತ್ತು ಹಾಲಿ ಶಾಸಕ ಕೆ ಎಸ್ ಈಶ್ವರಪ್ಪ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಈಶ್ವರಪ್ಪ ಅವರಿಗೆ ಟಿಕೆಟ್‌ ನಿರಾಕರಿಸಿದ್ದರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ವರುಣಾದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಣಕ್ಕಿಳಿದ್ದಿದು ಅವರ ವಿರುದ್ಧ ವಿ ಸೋಮಣ್ಣ ಸ್ಪರ್ಧೆ ಮಾಡುತ್ತಿದ್ದು ಹೈವೋಲ್ಟೇಜ್‌ ಕ್ಷೇತ್ರವಾಗಿ ಮಾರ್ಪಟ್ಟಿದೆ. ಇದಲ್ಲದೆ ಸಂಸದೆ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್, ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರೊಂದಿಗೆ ಮಂಡ್ಯ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಯಮಕನಮರಡಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಚಿವೆ ಶಶಿಕಲಾ ಜೊಲ್ಲೆ ತಮ್ಮ ಸಾಂಪ್ರದಾಯಿಕ ಕ್ಷೇತ್ರವಾದ ನಿಪ್ಪಾಣಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಪತ್ರ ಸಲ್ಲಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

ಗುರುವಾರ ನಾಮಪತ್ರ ಸಲ್ಲಿಸಿದ ಇತರರಲ್ಲಿ ಬಿಜೆಪಿಯ ಎಂಪಿ ರೇಣುಕಾಚಾರ್ಯ (ಹೊನ್ನಾಳಿ), ಕಟ್ಟಾ ಜಗದೀಶ್ (ಹೆಬ್ಬಾಳ) ಮತ್ತು ರಾಮಚಂದ್ರಗೌಡ (ಸಿಡ್ಲಘಟ್ಟ), ಕಾಂಗ್ರೆಸ್‌ನ ರಮಾನಾಥ ರೈ (ಬಂಟ್ವಾಳ) ಮತ್ತು ಯೋಗೀಶ್ ಎಚ್‌ಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+