ಆಸ್ತಿ ತೆರಿಗೆ ಮೇಲಿನ ಶೇ.5 ರಿಯಾಯಿತಿ ಸೌಲಭ್ಯ ವಿಸ್ತರಣೆ
ಬೆಂಗಳೂರು, ಏಪ್ರಿಲ್ 9: ನಗರ ಸ್ಥಳೀಯ ಸಂಸ್ಥೆಗಳು ಆಸ್ತಿ ತೆರಿಗೆ ಮೇಲೆ ಒದಗಿಸಲಾಗುವ ಶೇ.5ರಷ್ಟು ರಿಯಾಯಿತಿ ಕಾಲಾವಧಿಯನ್ನು ಏಪ್ರಿಲ್‌ಗೆ ಮಾತ್ರ ಸೀಮಿತಗೊಳಿಸದೆ ಮೇ 31 ರವರೆಗೆ ವಿಸ್ತರಿಸಲಾಗಿದೆ.
Recommended Video
ಬೆಂಗಳೂರು ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು ಎಲ್ಲಾ ಸ್ಥಳೀಯ ಸಂಶ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.
ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಇಡೀ ದೇಶಾದ್ಯಂತ ನಿಷೇಧಾಜ್ಞೆ ಜಾರಿ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಳಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲೂ ಮೇ 31ರವರೆಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ನೀಡಬೇಕು ಎಂಬ ಬೇಡಿಕ ಇದೆ. ಆದರೆ ಈ ಕುರಿತು ಬಿಬಿಎಂಪಿ ಆಯುಕ್ತರು ಇದುವರೆಗೂ ಯಾವುದೇ ನಿರ್ಧಾರವನ್ನು ತಿಳಿಸಿಲ್ಲ.

ಅನಗತ್ಯವಾಗಿ ಯಾರೂ ಹೊರಗೆ ಬರುವುದು ಬೇಡ
ಕೊರೊನಾ ಲಾಕ್‌ಡೌನ್‌ನಿಂದಾಗಿ ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಅನಗತ್ಯವಾಗಿ ಹೊರಗೆ ಬಾರದಂತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಆರ್ಥಿಕ ವರ್ಷದ ಆರಂಭದಿಂದಲೇ ತೆರಿಗೆ ಕಟ್ಟಬೇಕು
ಪೌರಸಭೆಗಳ ಕಾಯ್ದೆಯನ್ವಯ ಆರ್ಥಿಕ ವರ್ಷದ ಆರಂಭದಿಂದಲೇ ಸಾರ್ವಜನಿಕರು ನಗರ ಸ್ಥಳೀಯ ಸಂಸ್ಥೆಗಳಿಗೆ ಆಸ್ತಿ ತೆರಿಗೆ ಭರಿಸಬೇಕಾಗುತ್ತದೆ. ಮತ್ತು ಆರ್ಥಿಕ ವರ್ಷದ ಮೊದಲನೇ ತಿಂಗಳಿನಲ್ಲಿಯೇ ಆಸ್ತಿ ತೆರಿಗೆ ಸಂದಾಯ ಮಾಡುವ ನಾಗರಿಕರಿಗೆ ಶೇ.5ರಷ್ಟು ರಿಯಾಯಿತಿ ಸೌಲಭ್ಯವಿದೆ.

ಶೇ.5ರಷ್ಟು ರಿಯಾಯಿತಿ ಮೇ 31ರವರೆಗೂ ಅನ್ವಯ
ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ, ಬ್ಯಾಂಕ್‌ಗಳಿಗೆ ದೌಡಾಯಿಸುವುದನ್ನು ತಡೆಯಲು ಆಸ್ತಿ ತೆರಿಗೆ ಮೇಲಿನ ಶೇ.5 ರಷ್ಟು ರಿಯಾಯಿತಿ ಕಾಲಾವಧಿಯನ್ನು ಮೇ.31ರವರೆಗೆ ವಿಸ್ತರಿಸಲಾಗಿದೆ.

ಇದು 2020-20ಸಾಲಿಗೆ ಮಾತ್ರ ಅನ್ವಯ
ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಆರ್ಥಿಕ ವರ್ಷ 2020-20ನೇ ಸಾಲಿಗೆ ಮಾತ್ರ ಅನ್ವಯಿಸುವಂತೆ ಆಸ್ತಿ ತೆರಿಗೆ ಮೇಲಿನ ಶೇ.5ರಷ್ಟು ರಿಯಾಯಿತಿ ಸೌಲಭ್ಯದ ಕಾಲಮಿತಿಯನ್ನು 2020ರ ಏಪ್ರಿಲ್ 1ರಿಂದ 2020ರ ಮೇ 31ರವರೆಗೆ ವಿಸ್ತರಿಸಿ ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿಸಲು ಅನುವು ಮಾಡಿಕೊಡಲು ಕ್ರಮವಹಿಸಿ ಸೂಚಿಸಲಾಗಿದೆ.












Click it and Unblock the Notifications