IFS Officers Transfer: ರಾಜ್ಯದಲ್ಲಿ 5 ಐಎಫ್‌ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
IFS Officers Transfer: ರಾಜ್ಯದ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ಐದು ಮಂದಿ ಹಿರಿಯ ಐಎಫ್‌ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಸುಧಾರಣೆಗಳ ಹಿನ್ನೆಲೆಯಲ್ಲಿ 5 ಭಾರತೀಯ ಅರಣ್ಯ ಸೇವೆ ಹಿರಿಯ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿಸೂಚನೆಯಂತೆ ಬಂಡೀಪುರ, ಕಲಬುರಗಿ, ವಿರಾಜಪೇಟೆ ಮತ್ತು ಕೊಳ್ಳೇಗಾಲ ಅರಣ್ಯ ವಿಭಾಗಗಳಿಗೆ ಹೊಸ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಎಲ್ಲೆಲ್ಲಿಗೆ ನೂತನ ಅಧಿಕಾರಿಗಳ ನೇಮಕ?
* ಬಂಡೀಪುರ ರಾಷ್ಟ್ರೀಯ ಉದ್ಯಾನವನ
* ಕಲಬುರಗಿ
* ವಿರಾಜಪೇಟೆ
* ಕೊಳ್ಳೇಗಾಲ
* ಮೈಸೂರು
ಯಾರು ಎಲ್ಲಿಂದ ಎಲ್ಲಿಗೆ ವರ್ಗಾವಣೆ?
* ಎಸ್. ಪ್ರಭಾಕರನ್: ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾಗಿದ್ದ ಇವರನ್ನು ಇದೀಗ ಮೈಸೂರಿನ ವರ್ಕಿಂಗ್ ಪ್ಲಾನ್ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
* ಶಿಂಧೆ ನೀಲೇಶ್ ದೇವೋಬಾ: ದಾಂಡೇಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ (ಅಂಶಿ-ದಾಂಡೇಲಿ) ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾಗಿದ್ದ ಶಿಂಧೆ ನೀಲೇಶ್ ಇವರನ್ನು ಈಗ ಕಲಬುರಗಿ ವಿಭಾಗದ ಉಪ ಅರಣ್ಯ ಸಂರಕ್ಷಣ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
* ಸುಮಿತ್‌ಕುಮಾರ್ ಸುಭಾಷ್‌ರಾವ್ ಪಾಟೀಲ್: ಕಲಬುರಗಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಸುಮಿತ್‌ಕುಮಾರ್ ಸುಭಾಷ್‌ರಾವ್ ಪಾಟೀಲ್ ಅವರನ್ನು ಈಗ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
* ಎನ್.ಎಚ್. ಜಗನ್ನಾಥ್: ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಎನ್.ಹೆಚ್. ಜಗನ್ನಾಥ್ ಅವರನ್ನು ಈಗ ಕೊಳ್ಳೇಗಾಲದ ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಈ ಹುದ್ದೆಯಲ್ಲಿರುವ ಸುರೇಂದ್ರ ಎಂ.ಸಿ.ಅವರು ಮೇ 31 ರಂದು ವಯೋನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈ ನೇಮಕಾತಿಯನ್ನ ಮಾಡಲಾಗಿದೆ ಎಂದು ವಿಜಯಕರ್ನಾಟಕ ವರದಿ ಮಾಡಿದೆ.
* ಎಲ್. ನಂದೀಶ್: ಬೆಂಗಳೂರಿನ ಕಾಡುಗೋಡಿಯಲ್ಲಿ ಇರುವ ಅರಣ್ಯ ತಾಂತ್ರಿಕ ಮತ್ತು ಆಡಳಿತಾತ್ಮಕ ತರಬೇತಿ ಸಂಸ್ಥೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಇವರನ್ನು ಈಗ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರನ್ನಾಗಿ ನೇಮಿಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯನ್ನು, ಬೆಂಗಳೂರಿನ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಸಮಾನ ಸ್ಥಾನಮಾನ ಮತ್ತು ಜವಾಬ್ದಾರಿಗಳನ್ನು ಹೊಂದಿರುವ ಹುದ್ದೆ ಎಂದು ಘೋಷಿಸಲಾಗಿದೆ. ಅದೇ ರೀತಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಹುದ್ದೆಯನ್ನು ಬೆಂಗಳೂರಿನ ಅರಣ್ಯ ಕೇಂದ್ರ ಕಚೇರಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಸಮಾನವೆಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ರಾಜ್ಯಪಾಲರ ನಿರ್ದೇಶನದ ಮೇರೆಗೆ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಪ್ರಸನ್ನ ಕುಮಾರ್ ಅವರು ಈ ವರ್ಗಾವಣೆ ಪ್ರಕ್ರಿಯೆಗೆ ಅಧಿಕೃತವಾಗಿ ಸಹಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಹೇಳುವುದಾದರೆ ಅರಣ್ಯ ಸಂರಕ್ಷಣೆ ಮತ್ತು ಆಡಳಿತದ ದಕ್ಷತೆಯನ್ನು ಹೆಚ್ಚಿಸುವುದು ಈ ವರ್ಗಾವಣೆಯ ಮುಖ್ಯ ಉದ್ದೇಶವಾಗಿದೆ.
ವರ್ಗಾವಣೆಯಾದ ಅಧಿಕಾರಿಗಳು
* ಎಸ್. ಪ್ರಭಾಕರನ್
* ಶಿಂಧೆ ನೀಲೇಶ್ ದೇವೋಬಾ
* ಸುಮಿತ್‌ಕುಮಾರ್ ಸುಭಾಷ್‌ರಾವ್ ಪಾಟೀಲ್
* ಎನ್.ಎಚ್. ಜಗನ್ನಾಥ್
* ಎಲ್. ನಂದೀಶ್












Click it and Unblock the Notifications