ಕರ್ನಾಟಕದ ಈ 5 ಜಿಲ್ಲೆಗಳ ವಿಭಜನೆಗೆ ತೆರೆಮರೆಯ ಕಸರತ್ತು, ಯಾವೆಲ್ಲಾ ಜಿಲ್ಲೆಗಳಿವೆ
ಕರ್ನಾಟಕದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಹಾಗೂ ಎರಡನೇ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಬೆಳಗಾವಿಯ ವಿಭಜನೆಯ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಬೆಳಗಾವಿಯನ್ನು ಮೂರು ಜಿಲ್ಲೆಗಳನ್ನಾಗಿ ವಿಭಜನೆ ಮಾಡುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. ಬೆಳಗಾವಿ ಮಾತ್ರವಲ್ಲದೆ ರಾಜ್ಯದ ಹಲವು ಜಿಲ್ಲೆಗಳ ವಿಭಜನೆಯ ಬಗ್ಗೆ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಯಾವೆಲ್ಲಾ ಜಿಲ್ಲೆಗಳ ವಿಭಜನೆಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿವರ ನೋಡೋಣ.
ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಮೂರು ಅಥವಾ ಎರಡು ಜಿಲ್ಲೆಗಳನ್ನಾಗಿ ಮಾಡಬೇಕು ಎನ್ನುವ ಚರ್ಚೆಯು ಹಲವು ದಿನಗಳಿಂದ ನಡೆಯುತ್ತಿದೆ. ಇದೀಗ ಬೆಳಗಾವಿಯನ್ನು ವಿಭಜನೆ ಮಾಡಿ ಚಿಕ್ಕೋಡಿ ಹಾಗೂ ಗೋಕಾಕ್ ಜಿಲ್ಲೆಗಳನ್ನಾಗಿ ಘೋಷಣೆ ಮಾಡುವುದಕ್ಕೆ ಜನಾಭಿಪ್ರಾಯ ಸಂಗ್ರಹಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ. ಬೆಳಗಾವಿಯ ಜೊತೆ ಜೊತೆಗೆ ರಾಜ್ಯದಲ್ಲಿ ಇನ್ನೂ ಒಂದಷ್ಟು ಜಿಲ್ಲೆಗಳ ವಿಭಜನೆಯ ಬಗ್ಗೆಯೂ ಚರ್ಚೆಗಳು ನಡೆದಿವೆ.

ಉತ್ತರ ಕನ್ನಡ ಜಿಲ್ಲೆ ವಿಭಜನೆ ಚರ್ಚೆ
ಕರಾವಳಿಯ ಪ್ರಮುಖ ಜಿಲ್ಲೆಗಳಲ್ಲಿ ಒಂದಾಗಿರುವ ಉತ್ತರ ಕನ್ನಡ ಮತ್ತು ಶಿರಸಿ ಜಿಲ್ಲೆಗಳನ್ನು ವಿಭಜನೆ ಮಾಡಬೇಕು ಎನ್ನುವ ಚರ್ಚೆಯು ಹಲವು ವರ್ಷಗಳಿಂದ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯು ಕರ್ನಾಟಕದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾಗಿದ್ದು, ಶಿರಸಿ ಅದರ ಭಾಗವಾಗಿರುವ ಒಂದು ಪ್ರಮುಖ ತಾಲ್ಲೂಕು ಕೇಂದ್ರವಾಗಿದೆ. ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ವಿಭಜಿಸುವ ಒತ್ತಡ ಇದೆ.
ಉತ್ತರ ಕನ್ನಡ ಜಿಲ್ಲೆಯು ಕರಾವಳಿ ಜಿಲ್ಲೆಯಾಗಿದ್ದು, 12 ತಾಲ್ಲೂಕುಗಳನ್ನು ಒಳಗೊಂಡಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ, ಜೋಯಿಡಾ, ಮುಂಡಗೋಡ ಮತ್ತು ಯಲ್ಲಾಪುರ ಪ್ರದೇಶಗಳು ಸೇರಿವೆ. ಶಿರಸಿ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲ್ಲೂಕು ಮತ್ತು ಉಪ ವಿಭಾಗದ ಕೇಂದ್ರವಾಗಿದೆ.
ತುಮಕೂರು ಜಿಲ್ಲೆ ವಿಭಜನೆ
ಇನ್ನು ಬೆಂಗಳೂರಿನ ಸಮೀಪದಲ್ಲೇ ಇರುವ ತುಮಕೂರು ಜಿಲ್ಲೆಯ ವಿಭಜನೆಯ ಬಗ್ಗೆಯೂ ಹಲವು ವರ್ಷಗಳಿಂದ ಚರ್ಚೆ ನಡೆದಿದೆ. ತುಮಕೂರಿನಲ್ಲಿ ಇದೀಗ ಹತ್ತು ತಾಲ್ಲೂಕುಗಳಿವೆ. ಈ ಜಿಲ್ಲೆಯಲ್ಲಿ ಹೆಚ್ಚು ತಾಲ್ಲೂಕುಗಳಿರುವುದರಿಂದ ಆಡಳಿತಾತ್ಮಕ ಸಮಸ್ಯೆ ಎದುರಾಗುತ್ತಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲೆಯನ್ನು ಎರಡು ಭಾಗವಾಗಿ ವಿಭಜನೆ ಮಾಡಬೇಕು ಎನ್ನುವ ಒತ್ತಡ ಇದೆ.
ಆದರೆ ಯಾವ ತಾಲ್ಲೂಕು ಕೇಂದ್ರವನ್ನು ಹೊಸ ಜಿಲ್ಲಾ ಕೇಂದ್ರವಾಗಿಸಬೇಕು ಎನ್ನುವ ಚರ್ಚೆ ತಾರ್ಕಿಕ ಅಂತ್ಯ ಕಂಡಿಲ್ಲ. ಮಧುಗಿರಿ ಮತ್ತು ತಿಪಟೂರು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎನ್ನುವ ಒತ್ತಡ ಇದೆ. ಆದರೆ, ಶಿರಾ ಸಹ ವಾಣಿಜ್ಯ ಕೇಂದ್ರವಾಗಿ ಅಭಿವೃದ್ಧಿ ಕಂಡಿದೆ. ಹೀಗಾಗಿ, ಯಾವ ಹೊಸ ಜಿಲ್ಲೆ ಆಗಲಿದೆ ಎನ್ನುವುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ.
ಪ್ರಮುಖ ಜಿಲ್ಲೆಗಳ ವಿಭಜನೆಗೆ ಚರ್ಚೆ: ಸುಗಮ ಆಡಳಿತದ ದೃಷ್ಟಿಯಿಂದ ಬೆಳಗಾವಿ, ತುಮಕೂರು, ಮೈಸೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳ ವಿಭಜನೆ ಮಾಡಬೇಕು ಎನ್ನುವ ಚರ್ಚೆ ನಡೆದಿದೆ. ಬೆಳಗಾವಿಯಿಂದ ಬೈಲಹೊಂಗಲ, ಗೋಕಾಕ್ ಹಾಗೂ ಚಿಕ್ಕೋಡಿ ಜಿಲ್ಲೆಯ ವಿಭಜನೆ ಮಾಡಬೇಕು ಎನ್ನುವ ಒತ್ತಡ ಇದೆ. ತುಮಕೂರಿನಿಂದ ಮಧುಗಿರಿ / ತಿಪಟೂರು, ಮೈಸೂರಿನಿಂದ ಹುಣಸೂರು, ಉತ್ತರ ಕನ್ನಡದಿಂದ ಶಿರಸಿ, ದಕ್ಷಿಣ ಕನ್ನಡದಿಂದ ಪುತ್ತೂರು ಜಿಲ್ಲೆಗಳ ರಚನೆಗೆ ಬೇಡಿಕೆ ಇದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications