ಜುಲೈ 1ರಿಂದ 5 ಕೆಜಿ ಅಕ್ಕಿ ಜೊತೆ 5 ಕೆಜಿ ಆಹಾರ ಧಾನ್ಯ ವಿತರಣೆ: ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು, ಜೂನ್ 2: ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ಪ್ರತಿ ತಿಂಗಳು 10 ಕೆಜಿ ಆಹಾರ ಧಾನ್ಯ ನೀಡುವುದಾಗಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ 10 ಕೆಜಿ ಅಕ್ಕಿ ಸಿಗುವುದಿಲ್ಲ ಎನ್ನುವುದು ಖಚಿತವಾಗಿದೆ.
ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಕ್ಕೆ ಫಲಾನುಭವಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಪ್ರತಿ ತಿಂಗಳು 35 ಕೆಜಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತದೆ.

ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ. 5 ಕೆ.ಜಿ. ಆಹಾರ ಧಾನ್ಯವನ್ನು ರಾಜ್ಯ ಸರ್ಕಾರದ ವೆಚ್ಚದಲ್ಲಿ ಉಚಿತವಾಗಿ ನೀಡುವುದಾಗಿ ತಿಳಿಸಿದೆ.
ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುತ್ತಿರುವ 5 ಕೆಜಿ ಆಹಾರ ಧಾನ್ಯಗಳ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ನೀಡುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಯಾವ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತದೆ ಎನ್ನುವುದುನ್ನು ಆದೇಶದಲ್ಲಿ ಎಲ್ಲಿಯೂ ತಿಳಿಸಿಲ್ಲ. ಜುಲೈ 1ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವವರು ಈ ಯೋಜನೆಯ ಫಲಾನುಭವವನ್ನು ಪಡೆದುಕೊಳ್ಳಲಿದ್ದಾರೆ.
ಅಕ್ಕಿ ದಾಸ್ತಾನು ಕೊರತೆ
ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಪೂರೈಕೆ ಮಾಡುವಷ್ಟು ಅಕ್ಕಿ ದಾಸ್ತಾನು ಲಭ್ಯವಿಲ್ಲದ ಕಾರಣ 10 ಕೆಜಿ ಅಕ್ಕಿ ಕೊಡುವ ಬದಲಾಗಿ 5 ಕೆಜಿ ಅಕ್ಕಿ ಮತ್ತು 5 ಕೆಜಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದ್ದರು.
ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಎಲ್ಲರಿಗೂ ಪ್ರತಿ ತಿಂಗಳು ಉಚಿತವಾಗಿ ಅಕ್ಕಿ ಮತ್ತು ಆಹಾರ ಧಾನ್ಯ ಲಭ್ಯವಾಗಲಿದೆ. ಅಕ್ಕಿ ಖರೀದಿ ಮಾಡಲು ರಾಜ್ಯ ಸರ್ಕಾರ ಅಂದಾಜು 1400 ಕೋಟಿ ರುಪಾಯಿ ಖರ್ಚು ಮಾಡಬೇಕಾಗುತ್ತದೆ. ಅಕ್ಕಿ ದಾಸ್ತಾನು ಇಲ್ಲದ ಕಾರಣ, ಆಹಾರ ಧಾನ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications