ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

50 ಲಕ್ಷ ಸದಸ್ಯರ ಸೇರ್ಪಡೆ 5 ಲಕ್ಷ ಬಿಜೆಪಿ ಕಾರ್ಯಕರ್ತರ ಶ್ರಮ

|
Google Oneindia Kannada News

ಬೆಂಗಳೂರು, ಜುಲೈ 04 : ಕರ್ನಾಟಕ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶನಿವಾರ ಚಾಲನೆ ದೊರೆಯಲಿದೆ. 50 ಲಕ್ಷ ಸದಸ್ಯತ್ವದ ಗುರಿಯನ್ನು ಹೊಂದಲಾಗಿದ್ದು, 5 ಲಕ್ಷ ಕಾರ್ಯಕರ್ತರು ನೋಂದಣಿ ಅಭಿಯಾನಕ್ಕಾಗಿ ಶ್ರಮಿಸಲಿದ್ದಾರೆ.

ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಸದಸ್ಯತ್ವ ಅಭಿಯಾನದ ಪ್ರಮುಖ್ ಎನ್.ರವಿ ಕುಮಾರ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. 'ಸುಮಾರು ಒಂದು ತಿಂಗಳ ಕಾಲ ದೇಶಾದ್ಯಂತ ನಡೆಯುವ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ' ಎಂದರು.

ಬಿಜೆಪಿ ಸದಸ್ಯತ್ವ ಅಭಿಯಾನ : ಕರ್ನಾಟಕ ಬಿಜೆಪಿ ಗುರಿ 50 ಲಕ್ಷಬಿಜೆಪಿ ಸದಸ್ಯತ್ವ ಅಭಿಯಾನ : ಕರ್ನಾಟಕ ಬಿಜೆಪಿ ಗುರಿ 50 ಲಕ್ಷ

ಕರ್ನಾಟಕದಲ್ಲಿ 50 ಲಕ್ಷ ಸದಸ್ಯರನ್ನು ಸೇರಿಸಿಕೊಳ್ಳುವ ಗುರಿಯನ್ನು ಹೊಂದಲಾಗಿದೆ. ಜೊತೆಗೆ 2 ಲಕ್ಷ ಜನರನ್ನು ಸಕ್ರಿಯ ಸದಸ್ಯರನ್ನಾಗಿ ಹೊಂದುವ ಗುರಿಯನ್ನು ಹಾಕಿಕೊಳ್ಳಲಾಗಿದೆ. 5 ಲಕ್ಷ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜೆಪಿ ನಡ್ಡಾ ನೇಮಕಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಜೆಪಿ ನಡ್ಡಾ ನೇಮಕ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾನಗಳಲ್ಲಿ ಜಯಗಳಿಸಿರುವ ಬಿಜೆಪಿ ಪಕ್ಷದ ತತ್ವ, ಸಿದ್ದಾಂತ, ಆದರ್ಶಗಳ ಬಗ್ಗೆ ಒಲವಿರುವವರನ್ನು ತಲುಪಿ ಅವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಲು ಸಕಲ ರೀತಿಯಲ್ಲಿ ಸಜ್ಜಾಗಿದೆ....

ರಾಜ್ಯದ 25 ಬಿಜೆಪಿ ಸಂಸದರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಷರತ್ತು?ರಾಜ್ಯದ 25 ಬಿಜೆಪಿ ಸಂಸದರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಷರತ್ತು?

ಅಭಿಯಾನಕ್ಕೆ ಯಡಿಯೂರಪ್ಪ ಚಾಲನೆ

ಅಭಿಯಾನಕ್ಕೆ ಯಡಿಯೂರಪ್ಪ ಚಾಲನೆ

ಕರ್ನಾಟಕ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಜುಲೈ 6ರಂದು ಸಂಜೆ 4 ಗಂಟೆಗೆ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಚಾಲನೆ ನೀಡಲಿದ್ದಾರೆ. ಸುಮಾರು 1 ತಿಂಗಳ ಕಾಲ ಅಭಿಯಾನ ನಡೆಯಲಿದ್ದು, ಆಗಸ್ಟ್ 11ರಂದು ಯಡಿಯೂರಪ್ಪ ಅಭಿಯಾನದ ಕುರಿತು ಕೇಂದ್ರ ಘಟಕಕ್ಕೆ ವರದಿ ಸಲ್ಲಿಸಲಿದ್ದಾರೆ.

ಯಾರಿಗೆ ಸದಸ್ಯತ್ವ ನೀಡುವುದಿಲ್ಲ

ಯಾರಿಗೆ ಸದಸ್ಯತ್ವ ನೀಡುವುದಿಲ್ಲ

ಪಕ್ಷದ ತತ್ವ, ಸಿದ್ದಾಂತ, ಆದರ್ಶಗಳ ಬಗ್ಗೆ ಆಸಕ್ತಿ ಇರುವವರನ್ನು ಸೇರಿಸಿಕೊಳ್ಳಲಾಗುತ್ತದೆ. ಅಪರಾಧ ಚಟುವಟಿಕೆ, ವಂಚನೆ, ಭಯೋತ್ಪಾದನೆಯಂತಹ ಚಟುವಟಿಕೆ ಹಿನ್ನಲೆ ಹೊಂದಿರುವವರಿಗೆ ಸದಸ್ಯತ್ವ ನೀಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಮಿಸ್ ಕಾಲ್‌ ಕೊಟ್ಟು ಸದಸ್ಯರಾಗಿ

ಮಿಸ್ ಕಾಲ್‌ ಕೊಟ್ಟು ಸದಸ್ಯರಾಗಿ

ಮಿಸ್ ಕಾಲ್ ನೀಡುವ ಮೂಲಕವೂ ಸದಸ್ಯರಾಗಲು ಅವಕಾಶವಿದೆ. ಮಿಸ್ ಕಾಲ್ ಕೊಟ್ಟವರ ಮಾಹಿತಿಯನ್ನು ಅರ್ಜಿಯಲ್ಲಿ ದಾಖಲು ಮಾಡಿಕೊಳ್ಳಲಾಗುತ್ತದೆ. ಸದಸ್ಯತ್ವ ಕೋರುವ ವ್ಯಕ್ತಿಗಳ ಬಗ್ಗೆ ತಿಳಿದುಕೊಳ್ಳಲು ಪರಿಶೀಲನಾ ಸಮಿತಿಯನ್ನು ರಚನೆ ಮಾಡಲಾಗಿದೆ.

ಸಕ್ರಿಯ ಸದಸ್ಯರಾಗಿ ಆಯ್ಕೆ

ಸಕ್ರಿಯ ಸದಸ್ಯರಾಗಿ ಆಯ್ಕೆ

ಯಾವ ಕಾರ್ಯಕರ್ತರು 25 ಮಂದಿಯನ್ನು ಸದಸ್ಯರನ್ನಾಗಿ ಪಕ್ಷಕ್ಕೆ ಸೇರಿಸುತ್ತಾರೋ ಅವರನ್ನು ಸಕ್ರಿಯ ಸದಸ್ಯರನ್ನಾಗಿ ಮಾಡಲಾಗುತ್ತದೆ. ಸದಸ್ಯತ್ವ ಪರಿಶೀಲನೆಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿ ಇದೆ. ಸಕ್ರಿಯ ಸದಸ್ಯತ್ವ ನೀಡುವ ಬಗ್ಗೆ ಸಮಿತಿ ತೀರ್ಮಾನ ಕೈಗೊಳ್ಳುತ್ತದೆ.

English summary
Karnataka BJP general secretary N. Ravikumar said that 5 lakh activities to take part in membership drive that will began on July 6, 2019. Karnataka BJP aim to join 50 lakh members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X