ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Ramdurg Chinchnur Accident : ಬೆಳಗಾವಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ: ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಜನವರಿ 5: ಬೆಳಗಾವಿಯಲ್ಲಿ ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ ಆರು ಜನ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿಯ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು,ಪ್ರಕರಣದ ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದರು.

ದಶಪಥ ರಸ್ತೆ ಲೋಕಾರ್ಪಣೆ : ಪರಿಶೀಲಿಸಿ ತೀರ್ಮಾನ

ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆಯಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ, ತೀರ್ಮಾನಕ್ಕೆ ಬರಲಾಗುವುದು ಎಂದರು.

5 Lakh Compensation To The Family Of Belagavi Accident Victim Says Basavaraj Bommai

ಸ್ಯಾಂಟ್ರೋ ರವಿ ಜೊತೆ ಬಿಜೆಪಿ ನಾಯಕರು ಸಂಪರ್ಕ ದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಯಾಂಟ್ರೋ ರವಿ ಬಗ್ಗೆ ಹೇಳಿರುವುದು, ಅವರು ಯಾರು ಎಂದೂ ನನಗೆ ಗೊತ್ತಿಲ್ಲ, ಕುಮಾರಸ್ವಾಮಿ ಅವರೇ ಇದರ ಬಗ್ಗೆ ಹೇಳಿದ್ದು. ಕುಮಾರಸ್ವಾಮಿ ಬಳಿ‌ ಯಾವ ಮಾಹಿತಿ ಇದೆಯೋ‌ ಕೊಡಲಿ, ಆಮೇಲೆ ನೋಡೋಣ ಎಂದು ಹೇಳಿದರು.

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತದಿಂದ 6 ಮಂದಿ ಸಾವು;5 ಲಕ್ಷ
ಪರಿಹಾರ: ಗೋವಿಂದ ಕಾರಜೋಳ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ 6 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನ ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ಈ ವಾಹನ ಅಪಘಾತದಲ್ಲಿ 16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾನೆ ಎಂದರು.

5 Lakh Compensation To The Family Of Belagavi Accident Victim Says Basavaraj Bommai

ಇನ್ನೂ ಮೃತರ ಕುಟುಂಬಕ್ಕೆ ಆಗಿರು ದುಃಖ ಹಾಗೂ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಭಗವಂತ ಶಾಂತಿಯನ್ನ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗೋವಿಂದ ಕಾರಜೋಳ ಅವರು ಹೇಳಿದರು.

ಬೆಳಗಾವಿ ಕಡಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚುಂಚನೂರು ಬಳಿ ದುರ್ಘಟನೆ ನಡೆದಿದೆ. ವಿಠ್ಠಲ, ರುಕ್ಮಿಣಿ ದೇವಸ್ಥಾನದ ಆಲದ ಮರಕ್ಕೆ ಮಹೇಂದ್ರ ಗೂಡ್ಸ್ ವಾಹನ ಡಿಕ್ಕಿಯಾಗಿ ಈ ಅವಘಾಡ ಸಂಭವಿಸಿದೆ. ಈ ಅಪಘಾತದಲ್ಲಿ ಹನಮ್ಮವ್ವ (24), ದೀಪಾ (31), ಸವಿತಾ (12), ಸುಪ್ರೀತಾ (11), ಮಾರುತಿ (42), ಇಂದ್ರವ್ವಾ (24) ಮೃತ ದುರ್ದೈವಿಗಳು.
ಇನ್ನೂ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಗೋಕಾಕ್ ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary
5 lakh compensation to the family of belagavi accident victim Says Chief Minister Basavaraj Bommai,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X