ಕರ್ನಾಟಕ; ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ

ಬೆಂಗಳೂರು, ಆಗಸ್ಟ್ 25; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಕೊರತೆ ಇದೆ. ಅಂಗನವಾಡಿಗಳಲ್ಲಿ ಮೊದಲ ಡೋಸ್ ಕೊಟ್ಟಿದ್ದ ಸರ್ಕಾರ ಎರಡನೇ ಡೋಸ್‌ಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂಬ ಆರೋಪಗಳಿವೆ. ಈ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, "ಸೆಪ್ಟೆಂಬರ್‌ನಿಂದ ರಾಜ್ಯದಲ್ಲಿ ಪ್ರತಿ ದಿನ 5 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತದೆ. ಪ್ರಸ್ತುತ 2.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ" ಎಂದು ಹೇಳಿದರು.

ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಪೂರೈಕೆ ಮಾಡುತ್ತದೆ. "1.5 ಕೋಟಿ ಡೋಸ್ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದ್ದೇವೆ" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Vaccine

ಕರ್ನಾಟಕದಲ್ಲಿ ಆಗಸ್ಟ್ 24ರ ರಾತ್ರಿ 9 ಗಂಟೆಯ ತನಕ 3,79,01,502 ಜನರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಸೋಮವಾರ 3,47,745 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚು ಲಸಿಕೆ ನೀಡಲಾಗಿದ್ದು 65,908 ಜನರಿಗೆ ಲಸಿಕೆ ನೀಡಲಾಗಿದೆ. ಮೈಸೂರಿನಲ್ಲಿ 20,673 ಮತ್ತು ದಕ್ಷಿಣ ಕನ್ನಡದಲ್ಲಿ 20,663 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಡಿಸೆಂಬರ್ ಅಂತ್ಯದ ವೇಳೆಗೆ ದೇಶದಲ್ಲಿ ಪ್ರತಿ ತಿಂಗಳು 12 ಕೋಟಿ ಕೋವಿಶೀಲ್ಡ್ ಮತ್ತು 5.8 ಕೋಟಿ ಡೋಸ್ ಕೊವ್ಯಾಕ್ಸಿನ್ ಉತ್ಪಾದನೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಇತ್ತೀಚೆಗೆ ಮಾಹಿತಿ ನೀಡಿದೆ.

ಲಸಿಕೆ ತಯಾರು ಮಾಡುವ ಕಂಪನಿಗಳ ಸದ್ಯದ ಉತ್ಪಾದನಾ ಸಾಮರ್ಥ್ಯ ಹಾಗೂ ಡಿಸೆಂಬರ್ ವೇಳೆಗೆ ಉತ್ಪಾದನಾ ಸಾಮರ್ಥ್ಯ ಎಷ್ಟು ಹೆಚ್ಚಳ ಮಾಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ಮಹತ್ವದ ಮೈಲುಗಲ್ಲು; ಜೂನ್ 7ರಂದು ಪ್ರಧಾನಿ ನರೇಂದ್ರ ಮೋದಿ ಕೋವಿಡ್‌ ಲಸಿಕೆಯ ನೂತನ ಹಂತವನ್ನು ಘೋಷಣೆ ಮಾಡಿದ್ದರು. ಜನರಿಗೆ ತಾವು ಲಸಿಕೆ ಪಡೆಯುವಂತೆ ಹಾಗೂ ಆ ಮೂಲಕ ಲಸಿಕೆ ಪಡೆಯಲು ಇತರ ಅರ್ಹರನ್ನು ಉತ್ತೇಜಿಸುವಂತೆ ಕರೆ ಕೊಟ್ಟಿದ್ದರು. ಬಳಿಕ ದೇಶದಲ್ಲಿ ಲಸಿಕಾ ಅಭಿಯಾನ ವೇಗ ಪಡೆದುಕೊಂಡಿದೆ.

ಭಾರತದಲ್ಲಿ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನ ನಡೆಯುತ್ತಿದೆ. ಇದರ ಅಡಿಯಲ್ಲಿ 2021ರ ಆಗಸ್ಟ್ 16ರಂದು ಸುಮಾರು 88,13,919 ಡೋಸ್‌ ಲಸಿಕೆಗಳನ್ನು ನೀಡಲಾಗಿದೆ. ಈ ಮೂಲಕ ಲಸಿಕಾ ಅಭಿಯಾನದಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಲಾಗಿದೆ.

ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ನೀಡುವ ವೇಗವನ್ನು ಹೆಚ್ಚಿಸಲು ಬದ್ಧವಾಗಿದೆ. ಹೆಚ್ಚಿನ ಲಸಿಕೆಗಳ ಲಭ್ಯತೆ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮುಂಗಡವಾಗಿಯೇ ಮಾಹಿತಿ ನೀಡಲಾಗುತ್ತದೆ. ಇದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಉತ್ತಮ ಯೋಜನೆಯನ್ನು ರೂಪಿಸಲು ಸಹಾಯಕವಾಗುತ್ತಿದೆ.

ದೇಶದಲ್ಲಿ ಶೇ 46ರಷ್ಟು ಜನರು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಎಲ್ಲಾ ವಯಸ್ಕ ಭಾರತೀಯರಲ್ಲಿ ಶೇ 13 ರಷ್ಟು ಜನರು ಎರಡೂ ಡೋಸ್ ಲಸಿಕೆಗಳನ್ನು ಪಡೆದಿದ್ದಾರೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವೇ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸುತ್ತಿದೆ. ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಲಸಿಕೆಗಳಲ್ಲಿ ಶೇ.75ರಷ್ಟನ್ನು ಸರ್ಕಾರವೇ ಖರೀದಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+