Breaking: ಕರ್ನಾಟಕದಲ್ಲಿ 2ನೇ ದಿನವೂ ಕೊರೊನಾದಿಂದ 5 ಮಂದಿ ಸಾವು!

ಬೆಂಗಳೂರು, ಆಗಸ್ಟ್ 13: ಕರ್ನಾಟಕದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಸಾವನ್ನಪ್ಪುವವರ ಸಂಖ್ಯೆ ಯಥಾವತ್ತಾಗಿ ಮುಂದುವರಿದಿದೆ. ರಾಜ್ಯದಲ್ಲಿ ನಿರಂತರ ಎರಡನೇ ದಿನವೂ ಕೋವಿಡ್-19 ಸೋಂಕಿನಿಂದ 5 ಮಂದಿ ಪ್ರಾಣ ಬಿಟ್ಟಿದ್ದಾರೆ.
ಕರ್ನಾಟಕದಲ್ಲಿ ಕಳೆದೊಂದು ದಿನದಲ್ಲಿ ಪಾಸಿಟಿವಿಟಿ ದರ ಶೇ.4.26ರಷ್ಟಾಗಿದೆ. ಇನ್ನು ಒಂದು ವಾರದ ಪಾಸಿಟಿವಿಟಿ ದರವು ಶೇ.6.07ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಮತ್ತೆ ಏರುತ್ತಿದೆ ಕೊರೋನಾ, ಎಲ್ಲಿ ಪಾಸಿಟಿವಿಟಿ ಪ್ರಮಾಣ ಅಧಿಕ ಗೊತ್ತಾ?
ಕಳೆದ 24 ಗಂಟೆಗಳಲ್ಲಿ 1329 ಮಂದಿಗೆ ಕೊರೊನಾ ವೈರಸ್ ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಐವರು ಮೃತಪಟ್ಟಿದ್ದು, 1614 ಸೋಂಕಿತರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಇದುವರೆಗೂ ಒಟ್ಟು 4029446 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 3979155 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಮಹಾಮಾರಿಗೆ ಈವರೆಗೆ 40144 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 10105 ಸಕ್ರಿಯ ಪ್ರಕರಣಗಳಿವೆ.

5 people death due to coronavirus in karnataka on continuously second day

ಬೆಂಗಳೂರಿನಲ್ಲೇ 791 ಮಂದಿಗೆ ಕೋವಿಡ್-19:
ಇಡೀ ಕರ್ನಾಟಕದಲ್ಲಿ 1329 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದರೆ, ಅದರಲ್ಲಿ ಬೆಂಗಳೂರಿನದ್ದೇ ಸಿಂಹಪಾಲಿದೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 791 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಜಿಲ್ಲೆಯಲ್ಲಿ ಇದುವರೆಗೂ 1850840 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 1827080 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿಗೆ ಇದುವರೆಗೂ 16978 ಜನರು ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 6781 ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+