ಗ್ರಾಹಕರ ಜೇಬಿಗೆ ಓಲಾ, ಉಬರ್‌ಗೆ ಕತ್ತರಿ ಹಾಕುವಂತಿಲ್ಲ

ಬೆಂಗಳೂರು, ಮೇ 28: ಓಲಾ, ಉಬರ್ ಸೇರಿದಂತೆ ಸಾರಿಗೆ ಸೇವೆ ನೀಡುವ ಅಗ್ರಿಗೇಟರ್‌ಗಳಿಗೆ ಶೇ.5ರಷ್ಟು ಮಾತ್ರ ಸೇವಾ ತರಿಗೆ ವಿಧಿಸಲು ಅವಕಾಶ ಮಾಡಿ ಸರಕಾರ ಹೊರಡಿಸಿದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಾಗಾಗಿ ಓಲಾ, ಉಬರ್ ಕಂಪನಿಗಳಿಗೆ ಕಾನೂನು ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ. ಅವರು ಗ್ರಾಹಕರಿಂದ ಹೆಚ್ಚಿನ ಶುಲ್ಕ ವಸೂಲಿಗೆ ಬ್ರೇಕ್ ಬಿದ್ದಿದೆ.

ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋ ರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರವು 2022ರ ನವೆಂಬರ್ 25ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.

5 Per Cent Service Tax For Ola Uber Taxi HC Upheld The State Order

ಅರ್ಜಿ ವಜಾ: ಆಟೋ ರಿಕ್ಷಾ ಪ್ರಯಾಣಕ್ಕೆ ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚಿನ ದರ ವಿಧಿಸಿ ಓಲಾ ಮತ್ತು ಉಬರ್ ತಮ್ಮ ಆ್ಯಪ್ ಮೂಲಕ ಆಟೋ ರಿಕ್ಷಾ ಸೇವೆ ನೀಡುತ್ತಿದ್ದು, ತಕ್ಷಣದಿಂದ ಬರುವಂತೆ ಈ ಸೇವೆಯನ್ನು ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

"ಅರ್ಜಿಗಳನ್ನು ವಜಾ ಮಾಡಲಾಗಿದೆ. ಈಗ ಎತ್ತಿ ಹಿಡಿಯಲಾಗಿರುವ ಸರ್ಕಾರದ ಆಕ್ಷೇಪಾರ್ಹವಾದ ಆದೇಶದ ಪ್ರಕಾರ ಮತ್ತು ನಿಗದಿಪಡಿಸಿದ ದರದ ಮೇಲೆ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ ಮತ್ತು ಉಬರ್ ಶೇ. 5ರಷ್ಟು ಸೇವಾ ಶುಲ್ಕ ಸಂಗ್ರಹಿಸಲು ಅರ್ಹರಾಗಿರುತ್ತಾರೆ" ಎಂದು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದೇಶದ ಪ್ರತಿ ಇನ್ನೂ ಹೊರಬಿದ್ದಿಲ್ಲ.

ಆಟೋ ರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಚಾಲ್ತಿಯಲ್ಲಿರುವ ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲಕಾಲಕ್ಕೆ ನಿಗದಿಪಡಿಸಿರುವ ಆಟೋ ರಿಕ್ಷಾ ಪ್ರಯಾಣ ದರಗಳ ಮೇಲೆ ಶೇ. 5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್‌ಟಿ ತೆರಿಗೆಯನ್ನು ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ರಾಜ್ಯದ ಎಲ್ಲಾ ಸಾರಿಗೆ ಪ್ರಾಧಿಕಾರಿಗಳಿಗೆ ರಾಜ್ಯ ಸರ್ಕಾರವು 2022ರ ನವೆಂಬರ್ 25ರಂದು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಓಲಾ ಮತ್ತು ಉಬರ್‌ ಆಕ್ಷೇಪಿಸಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+