ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 50 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 07: ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ಅಭಿಯಾನದ ವೇಗ ಹೆಚ್ಚಿಸಲಾಗಿದೆ. ಕರ್ನಾಟಕದಲ್ಲಿ 50 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಂಕಿ-ಅಂಶಗಳ ಬಗ್ಗೆ ಆರೋಗ್ಯ ಸಚಿವ ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಈವರೆಗೂ ಒಟ್ಟು 50,16,695 ಜನರಿಗೆ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ.

ಬುಧವಾರ ಮಧ್ಯಾಹ್ನ 2 ಗಂಟೆ ವೇಳೆ ಲಭ್ಯವಾದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ 45,13,857 ಫಲಾನುಭವಿಗಳು ಕೊವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. 5,02,838 ಜನರು ಎರಡು ಡೋಸ್ ಪಡೆದುಕೊಂಡಿದ್ದಾರೆ. ರಾಜ್ಯಾದ್ಯಂತ 6173 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ. 5564 ಸರ್ಕಾರಿ ಲಸಿಕೆ ಕೇಂದ್ರಗಳಾಗಿದ್ದು, 609 ಖಾಸಗಿ ಲಸಿಕೆ ಕೇಂದ್ರಗಳಾಗಿವೆ ಎಂದು ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

ಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು: ಕೇಂದ್ರದಿಂದ ಅಧ್ಯಯನಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು: ಕೇಂದ್ರದಿಂದ ಅಧ್ಯಯನ

50 Lakh Beneficiaries Got Vaccinated Against Coronavirus Across Karnataka

ಕರ್ನಾಟಕದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6150 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 39 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 3487 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1026584ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 45107 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Recommended Video

ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ 2ನೇ ಡೋಸ್‌ ಲಸಿಕೆ ಪಡೆದುಕೊಂಡ ಪ್ರಧಾನಿ ಮೋದಿ | Oneindia Kannada

English summary
50 Lakh Beneficiaries Got Vaccinated Against Coronavirus Across Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X