ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಲುಬಾಯಿ ರೋಗಕ್ಕೆ ಕೇಂದ್ರದಿಂದ 50 ಲಕ್ಷ ಡೋಸ್ ಲಸಿಕೆ ಪೂರೈಕೆ: ಸಚಿವ ಪ್ರಭು ಚೌಹಾಣ್!

|
Google Oneindia Kannada News

ಬೆಂಗಳೂರು, ಅ. 19: "ಕಾಲುಬಾಯಿ ರೋಗಕ್ಕೆ ಕೇಂದ್ರದಿಂದ 50 ಲಕ್ಷ ಡೋಸ್ ಲಸಿಕೆ ಮಂಜೂರಾಗಿದ್ದು, ಮೊದಲನೇ ಹಂತದಲ್ಲಿ 25 ಲಕ್ಷ ಡೋಸ್ ಲಸಿಕೆ ಪೂರೈಕೆಯಾಗುತ್ತಿದೆ. ಲಸಿಕೆಯನ್ನು ಆದ್ಯತೆಯ ಮೇಲೆ ಎಲ್ಲ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುವುದು" ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

"ಕರ್ನಾಟಕದ ದಕ್ಷಿಣ ಭಾಗದಲ್ಲಿ ಕಾಲುಬಾಯಿ ರೋಗ ಹೆಚ್ಚು ಕಂಡು ಬಂದಿದ್ದು ಈಗಾಗಲೇ ರಿಂಗ್ ವ್ಯಾಕ್ಸಿಂಗ್ ಮೂಲಕ ರೋಗವನ್ನು ಹತೋಟಿಗೆ ತರಲಾಗಿದೆ. ಮೊದಲನೇ ಹಂತದಲ್ಲಿ ಬಳ್ಳಾರಿ, ಯಾದಗಿರಿ, ಗುಲ್ಬರ್ಗಾ, ರಾಯಚೂರು, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಆಗಲಿದೆ" ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕಾಲುಬಾಯಿ ರೋಗ ಹೆಚ್ಚು ಕಂಡುಬರುತ್ತಿರುವ ಜಿಲ್ಲೆಗಳಲ್ಲಿ ಸ್ಯಾಂಪಲ್ ಸಂಗ್ರಹಣೆ ಮಾಡಿ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಪರೀಕ್ಷೆ ನೀಡಲಾಗಿತ್ತು, ಕರ್ನಾಟಕದಲ್ಲಿ ಓ ಮಾದರಿಯ ವೈರಸ್ ಕಂಡುಬಂದಿದೆ. ಜ್ವರ ಬಾದೆಯಿಂದ ಕರುಗಳು ಈ ರೋಗಕ್ಕೆ ಹೆಚ್ಚು ತುತ್ತಾಗುವ ಸಾಧ್ಯತೆ ಇರುವುದರಿಂದ ಪಶುಪಾಲಕರು ಕರುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಎಂದು ಪ್ರಭು ಚೌಹಾಣ್ ಮನವಿ ಮಾಡಿದ್ದಾರೆ.

ಐದು ಕಿ.ಮೀ. ವ್ಯಾಪ್ತಿಯಲ್ಲಿ ಲಸಿಕೆ!

ಐದು ಕಿ.ಮೀ. ವ್ಯಾಪ್ತಿಯಲ್ಲಿ ಲಸಿಕೆ!

ಎರಡನೇ ಹಂತದಲ್ಲಿ 27 ಲಕ್ಷ ಪೂರೈಕೆ ಆಗುತ್ತಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ನೀಡಲಾಗುತ್ತದೆ. ಸದ್ಯ ರಾಜ್ಯದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಾಲುಬಾಯಿ ರೋಗ ಕಾಣಿಸಿಕೊಂಡಿದೆ. ಹೀಗಾಗಿ ರೋಗೋದ್ರೇಕ ಕಂಡುಬಂದ 5 ಕಿಮೀ ವ್ಯಾಪಿಯಲ್ಲಿ ಲಸಿಕೆ ನೀಡಲಾಗುತ್ತಿದೆ.

ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

"ಪಶು ಕಲ್ಯಾಣ ಸಹಾಯವಾಣಿಯ ಉಪಯೋಗವನ್ನು ರಾಜ್ಯದ ಎಲ್ಲ ರೈತರು ಪಡೆದುಕೊಳ್ಳಬೇಕು. ಜಾನುವಾರುಗಳಲ್ಲಿ ರೋಗದ ಲಕ್ಷಣ ಕಂಡು ಬಂದರೆ ತಕ್ಷಣಕ್ಕೆ ಹತ್ತಿರದ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಅಥವಾ ಪಶುವೈದ್ಯಾಧಿಕಾರಿಗಳಿಗೆ ತಿಳಿಸಬೇಕು. ಒಂದು ವೇಳೆ ಇಲಾಖೆಯಿಂದ ಅಥವಾ ಪಶು ವೈದ್ಯಾಧಿಕಾರಿಗಳಿಂದ ಸ್ಪಂದನ ದೊರೆಯದಿದ್ದರೆ ಪಶು ಕಲ್ಯಾಣ ಸಹಾಯವಾಣಿಗೆ ದೂರು ಕೊಡಿ, ರೈತರು ನೀಡುವ ದೂರು ಆಧರಿಸಿ ನಿರ್ಲಕ್ಷ ತೋರಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ" ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ಸಚಿವ ಚೌಹಾಣ್‌ಗೆ ರೈತರ ಮನವಿ!

ಸಚಿವ ಚೌಹಾಣ್‌ಗೆ ರೈತರ ಮನವಿ!

ಗದಗ, ರಾಯಚೂರ ಹಾಗೂ ಮೈಸೂರು ಭಾಗದಿಂದ ಕೆಲ ರೈತರು ಹಾಗೂ ಪಶುಪಾಲಕರು ಸಚಿವರಿಗೆ ಕರೆ ಮಾಡಿ ಜಾನುವಾರುಗಳು ಅನುಭವಿಸುತ್ತಿರುವ ನೋವನ್ನು ತೋಡಿಕೊಂಡಿದ್ದಾರೆ. ಪಶುವೈದ್ಯಾಧಿಕಾರಿಗಳು ಕಾಲುಬಾಯಿ ರೋಗದಿಂದ ನರಳುತ್ತಿರುವ ಜಾನುವಾರುಗಳಿಗೆ ತುರ್ತಾಗಿ ಚಿಕಿತ್ಸೆ ನೀಡದಿರುವ ಬಗ್ಗೆ ರೈತರು ಸಚಿವ ಪ್ರಭು ಚೌಹಾಣ್ ಅವರಿಗೆ ಮನವಿ ಮಾಡಿದ್ದರು.

Recommended Video

Glenn Maxwell ಅವರು RCBಯಲ್ಲಿನ ತಮ್ಮ ಅನುಭವ ಹಂಚಿಕೊಂಡರು | Oneindia Kannada
ಆರೋಗ್ಯ ಕಾಪಾಡುವುದು ಇಲಾಖೆ ಹೊಣೆ

ಆರೋಗ್ಯ ಕಾಪಾಡುವುದು ಇಲಾಖೆ ಹೊಣೆ

"ರೈತರು ಹಾಗೂ ಜಾನುವಾರು ಸಾಕಣೆದಾರರು ಯಾವುದೇ ರೀತಿಯಿಂದ ಆತಂಕಪಡುವ ಅಗತ್ಯವಿಲ್ಲ ಕಾಲುಬಾಯಿ ರೋಗಕ್ಕೆ ಇಲಾಖೆಯಲ್ಲಿ ಲಸಿಕೆ ಲಭ್ಯವಿದ್ದು ತೀವ್ರವಾಗಿ ಅವುಗಳನ್ನು ಜಾನುವಾರುಗಳಿಗೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಾನುವಾರುಗಳ ಆರೋಗ್ಯ ಕಾಪಾಡುವುದು ನಮ್ಮ ಇಲಾಖೆಯ ಹೊಣೆ. ಅಧಿಕಾರಿಗಳು ಕೆಲ ಜಿಲ್ಲೆಗಳಲ್ಲಿ ನಿರ್ಲಕ್ಷ್ಯ ತೋರಿದ್ದು ಕಂಡು ಬಂದಿದೆ ಮುಂದಿನ ಸಭೆಯಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ" ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

English summary
50 lakh dose vaccine sanctioned for Canine disease to cattle: Prabhu Chauhan. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X