ರಾಜ್ಯದಲ್ಲಿ ಹೊಸ ಬಸ್ ಖರೀದಿಗೆ ಸರ್ಕಾರದಿಂದ 500 ಕೋಟಿ ಮಂಜೂರು, ಯಾವ ವಿಭಾಗಕ್ಕೆ ಎಷ್ಟು ತಿಳಿಯಿರಿ
ಬೆಂಗಳೂರು, ಆಗಸ್ಟ್ 21: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 150 ಕೋಟಿ ರೂಪಾಯಿಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಬೇಡಿಕೆ ಇರುವ ಸ್ಥಳಗಳಲ್ಲಿ ಹೆಚ್ಚಿನ ಬಸ್‌ಗಳನ್ನು ಒಡಿಸುವ ಗುರಿಯನ್ನು ಹೊಂದಿದೆ.
ಸಾರಿಗೆ ಇಲಾಖೆಗೆ ದೊಡ್ಡ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಹೊಸ ಬಸ್‌ಗಳನ್ನು ಖರೀದಿಸಲು ನಾಲ್ಕು ಸಾರಿಗೆ ನಿಗಮಗಳಿಗೆ 500 ಕೋಟಿ ರೂಪಾಯಿ ನೀಡಿದ್ದು, ಎಲ್ಲಾ ನಾಲ್ಕು ನಿಗಮಗಳು ತಮ್ಮ ವ್ಯಾಪ್ತಿಯಲ್ಲಿ ಹೊಸ ಬಸ್‌ಗಳನ್ನು ಖರೀದಿಸಲು ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಸಾರಿಗೆ ಸಂಸ್ಥೆಯ ನಾಲ್ವರು ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಸರ್ಕಾರ, ಹೊಸ ಬಸ್‌ಗಳನ್ನು ಖರೀದಿಸಲು ಹಣ ಮಂಜೂರು ಮಾಡಿರುವ ಕುರಿತು ಮಾಹಿತಿ ನೀಡಿದೆ. ಸಾರಿಗೆ ನಿಗಮಗಳಿಗೆ ಮಂಜೂರಾದ ಮೊತ್ತ ಇಂತಿದೆ.
1. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)- 100 ಕೋಟಿ ರೂ
2. ವಾಯವ್ಯ ಕರ್ನಾಟಕ ರಸ್ತೆ ನಿಗಮ (NWRTC)- 150 ಕೋಟಿ ರೂ
3. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)- 150 ಕೋಟಿ ರೂ
4. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ)- 100 ಕೋಟಿ ರೂ.
5. ಮಂಜೂರಾದ ಮೊತ್ತದೊಂದಿಗೆ, ನಾಲ್ಕು ನಿಗಮಗಳು ಒಟ್ಟಾಗಿ 2,500 ಹೊಸ ಬಸ್‌ಗಳನ್ನು ಸೇರಿಸಲು ಯೋಜಿಸಿವೆ.
'ಶಕ್ತಿ' ಯೋಜನೆ ಆರಂಭವಾದಾಗಿನಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಹಲವು ಮಾರ್ಗಗಳಲ್ಲಿ ಬಸ್‌ಗಳ ಬೇಡಿಕೆಯೂ ಹೆಚ್ಚಿದೆ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಂಟಿಸಿಗೆ 150 ಕೋಟಿ ರೂ. ಮಂಜೂರಾಗಿದ್ದು, ಬಸ್‌ಗಳ ಫ್ಲೀಟ್ ಹೆಚ್ಚಳದಿಂದ ಟ್ರಾಫಿಕ್ ಕಡಿಮೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ.
ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ಪ್ರಾರಂಭಿಸಿದಾಗಿನಿಂದ, ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ (ಆರ್‌ಟಿಸಿ) ಸರಾಸರಿ ದೈನಂದಿನ ಆದಾಯವು ಏರಿಕೆಯಾಗಿದೆ. ಕಾಂಗ್ರೆಸ್ ಪಕ್ಷದ ಐದು ಚುನಾವಣಾ ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಜೂನ್ 11 ರಂದು ಜಾರಿಗೆ ತರಲಾಗಿದೆ.
ಅಂಕಿಅಂಶಗಳ ಪ್ರಕಾರ, ಯೋಜನೆ ಜಾರಿಯಾಗಿ ಸುಮಾರು 20 ದಿನಗಳಲ್ಲಿ ಎಲ್ಲಾ ನಾಲ್ಕು ಸಾರಿಗೆ ನಿಗಮಗಳು - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) - ಗಮನಾರ್ಹ ಏರಿಕೆಯನ್ನು ತೋರಿಸಿದೆ.












Click it and Unblock the Notifications