Get Updates
Get notified of breaking news, exclusive insights, and must-see stories!

ಕರ್ನಾಟಕ | 20 ವರ್ಷದಲ್ಲಿ 500 ಲಘು ಹೆಲಿಕಾಪ್ಟರ್ ತಯಾರಿಕೆ, ಹೊಸ ಘಟಕ ಲೋಕಾರ್ಪಣೆ: ಎಂಬಿ ಪಾಟೀಲ್

ಕೋಲಾರ: ಮುಂದಿನ ಎರಡು ದಶಕಗಳಲ್ಲಿ ಕರ್ನಾಟಕದಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಇಲ್ಲಿನ ನೂತನ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಮಂಗಳವಾರ ಕೋಲಾರದ ವೇಮಗಲ್ ನಲ್ಲಿ ನಡೆದ ನೂತನ ಘಟಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶೇಷವೆಂದರೆ ಕಾರ್ಯಕ್ರಮಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರು ಮಹಾರಾಷ್ಟ್ರದ ಲೋಕಭವನದಿಂದ ವರ್ಚುಯಲ್ ಮೂಲಕ ಈ ಘಟಕವನ್ನು ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ವೇಮಗಲ್ ಘಟಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್, ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು, ಕೋಲಾರ ಸಂಸದ ಮಲ್ಲೇಶ ಬಾಬು ಸಾಕ್ಷಿಯಾದರು.

500 Helicopters to Be Manufactured in Next 20 Years at Kolara Vemgal New Plant Says M B Patil

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕ ಇದಾಗಿದೆ. ಇಲ್ಲಿ ಮುಂದಿನ 20 ವರ್ಷಗಳಲ್ಲಿ ನೂರಾರು ಲಘು ಹೆಲಿಕಾಪ್ಟರ್‌ಗಳನ್ನು ತಯಾರಿಸಲಾಗುತ್ತದೆ ಸಚಿವ ಪಾಟೀಲರು ತಿಳಿಸಿದರು.

ಈ ಘಟಕಕ್ಕೆ ನಾನು ಕೈಗಾರಿಕಾ ಸಚಿವನಾದ ಮೇಲೆ 17 ಎಕರೆ ಜಾಗ ಕೊಟ್ಟಿದ್ದು ದಾಖಲೆ ಅವಧಿ ಅಂದರೆ ಒಂದೂವರೆ ವರ್ಷದಲ್ಲಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ' ಎಂದು ಹರ್ಷ ವ್ಯಕ್ತಪಡಿಸಿದರು.'ಯೋಜನೆಗೆ ತ್ವರಿತ ಗತಿಯಲ್ಲಿ ಅನುಮೋದನೆ, ಇಲಾಖೆಗಳ ನಡುವೆ ಅತ್ಯುತ್ತಮ ಸಮನ್ವಯ, ಮೂಲಸೌಕರ್ಯ ಸನ್ನದ್ಧತೆ ಮತ್ತು ಕೈಗಾರಿಕಾ ಪಾಲುದಾರರೊಂದಿಗೆ ಸಕ್ರಿಯ ಪಾಲ್ಗೊಳ್ಳುವಿಕೆಗಳಿಂದ ಈ ಚಾರಿತ್ರಿಕ ಯೋಜನೆ ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಂಡಿದೆ ಎಂದರು.

ಹೆಲಿಕಾಪ್ಟರ್ ವಲಯಕ್ಕೆ ಬಲ

ಫ್ರಾನ್ಸ್, ಅಮೆರಿಕ, ಬ್ರೆಜಿಲ್ ನಂತರ ನಮ್ಮಲ್ಲಿ ಜಗತ್ತಿನ ನಾಲ್ಕನೆಯ ಎಚ್125 ಹೆಲಿಕಾಪ್ಟರ್ ತಯಾರಿಕೆ ಮತ್ತು ಅಂತಿಮ ಜೋಡಣೆ ಘಟಕ (ಎಫ್ಎಎಲ್- ಫೈನಲ್ ಅಸೆಂಬ್ಲಿ ಲೈನ್) ಬಂದಿರುವುದು ಈ ವಲಯಕ್ಕೆ ಮತ್ತಷ್ಟು ಬಲ ತರಲಿದೆ. ಜೊತೆಗೆ ನಿರ್ವಹಣೆ, ದುರಸ್ತಿ ಮತ್ತು ಓವರಹಾಲ್ (ಎಂಆರ್ಒ- ಮೇಂಟೆನೆನ್ಸ್, ರಿಪೇರ್ ಮತ್ತು ಓವರ್‌ಹಾಲ) ಸ್ಥಾವರವೂ ಆರಂಭಗೊಂಡಿರುವುದು ರಾಜ್ಯದ ಕೈಗಾರಿಕಾಸ್ನೇಹಿ ವಾತಾವರಣಕ್ಕೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದರು.

ವರ್ಷಕ್ಕೆ 10 ಹೆಲಿಕಾಪ್ಟರ್ ತಯಾರು

ಆರಂಭದಲ್ಲಿ ವರ್ಷಕ್ಕೆ ವರ್ಷಕ್ಕೆ 10 ಹೆಲಿಕಾಪ್ಟರುಗಳನ್ನು ತಯಾರಿಸಲಾಗುವುದು. ಮುಂದಿನ ಎರಡು ದಶಕಗಳಲ್ಲಿ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಇಲ್ಲಿ ಏವಿಯಾನಿಕ್ಸ್, ಹೈಡ್ರಾಲಿಕ್ ಸರ್ಕ್ಯೂಟ್, ಬಿಡಿಭಾಗಗಳು, ಇಂಧನ ವ್ಯವಸ್ಥೆ ಮತ್ತು ಎಂಜಿನ್ನುಗಳ ತಯಾರಿಕೆ ಸೇರಿದಂತೆ ಹಲವು ಮಹತ್ವದ ಚಟುವಟಿಕೆಗಳು ನಡೆಯಲಿವೆ. ಆಂಧ್ರ ಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ತೀವ್ರ ಸ್ಪರ್ಧೆಯನ್ನು ಎದುರಿಸಿ, ರಾಜ್ಯವು ಈ ಯೋಜನೆಯನ್ನು ಗೆದ್ದುಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಅವರು ಬಣ್ಣಿಸಿದ್ದಾರೆ.

ಬಹುಪಾಲು ಹೊಂದಿರುವ ಏರ್ ಬಸ್ ಕಂಪನಿ

ಏರ್ ಬಸ್ ಕಂಪನಿಯು ಜಾಗತಿಕ ಮಟ್ಟದಲ್ಲಿ ಏಕ ಎಂಜಿನ್ ಹೆಲಿಕಾಪ್ಟರುಗಳ ಕ್ಷೇತ್ರದಲ್ಲಿ 4,300 ಹೆಲಿಕಾಪ್ಟರುಗಳೊಂದಿಗೆ, ಮಾರುಕಟ್ಟೆಯಲ್ಲಿ ಶೇಕಡ 80ರಷ್ಟು ಪಾಲು ಹೊಂದಿದೆ. ಈ ಹೆಲಿಕಾಪ್ಟರ್‌ಗಳು ಇದುವರೆಗೂ 38 ಮಿಲಿಯನ್ ಗಂಟೆಗಳಷ್ಟು ಕಾಲ ಹಾರಾಟ ನಡೆಸಿ ದಾಖಲೆ ನಿರ್ಮಿಸಿವೆ. ರಾಜ್ಯದಲ್ಲಿ ಎಚ್125 ದರ್ಜೆಯ ಹೆಲಿಕಾಪ್ಟರ್ ತಯಾರಿಕೆಗೆ ಬೇಕಾದ ವಿಶ್ವಾಸಾರ್ಹತೆ ಮತ್ತು ಎಂಜಿನಿಯರಿಂಗ್ ಪರಿಣಿತಿ ಇದೆ. ಈ ವಲಯದಲ್ಲಿ ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ನಿಕಟವಾಗಿ ಕೆಲಸ ಮಾಡುವ ಆಸಕ್ತಿ ಹೊಂದಿದೆ ಎಂದು ಅವರು ಹೇಳಿದರು.

ಈ ಘಟಕವು ಭಾರತದ ದಕ್ಷತೆಯು ಪಡೆದುಕೊಳ್ಳುತ್ತಿರುವ ಹೊಸ ಶಕ್ತಿ ಮತ್ತು ಜಾಗತಿಕ ಮಟ್ಟದಲ್ಲಿ ಏರ್ಪಡಿಸಿಕೊಳ್ಳುವ ಸಹಭಾಗಿತ್ವದ ಸಂಕೇತವಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಮೃದ್ಧ ಅವಕಾಶಗಳು ತೆರೆದುಕೊಳ್ಳಲಿವೆ. ಉದ್ಯೋಗ ಸೃಷ್ಟಿಯೂ ಹೆಚ್ಚಾಗಲಿದೆ. ಇದರಿಂದ ರಾಜ್ಯದ ಯುವಜನರಿಗೆ ಆಧುನಿಕ ತಂತ್ರಜ್ಞಾನ ವಲಯಕ್ಕೆ ಪ್ರವೇಶ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+