ಕರ್ನಾಟಕ; 5018 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಅಕ್ಟೋಬರ್ 19 : ಕರ್ನಾಟಕದಲ್ಲಿ ಸೋಮವಾರ ಹೊಸ ಕೋವಿಡ್ ಪ್ರಕರಣಗಳಿಗಿಂತ ಗುಣಮುಖರಾಗಿ ಡಿಸ್ಚಾರ್ಜ್ ಆದವರೆ ಅಧಿಕವಾಗಿದ್ದಾರೆ. ರಾಜ್ಯದಲ್ಲಿ ಇಂದು 5018 ಹೊಸ ಪ್ರಕರಣಗಳು ದಾಖಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7,70,604ಕ್ಕೆ ಏರಿಕೆಯಾಗಿದೆ. ಸೋಮವಾರ ರಾಜ್ಯದಲ್ಲಿ 8005 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕರ್ನಾಟಕದಲ್ಲಿ ಇದುವರೆಗೂ ಕೋವಿಡ್ ಸೋಂಕಿತರಾದ 10542 ಜನರು ಮೃತಪಟ್ಟಿದ್ದಾರೆ. ಅಕ್ಟೋಬರ್ 19ರಂದು ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ ಕೇವಲ 64. ಹೊಸ ಪ್ರಕರಣ, ಸಾವಿನ ಪ್ರಕರಣ ರಾಜ್ಯದಲ್ಲಿ ಗಣನೀಯವಾಗಿ ಕಡಿಮೆಯಾಗಿದೆ.

5018 New COVID 19 Cases Karnataka On October 15

ರಾಜ್ಯದಲ್ಲಿ ಒಟ್ಟು ಐಸಿಯುನಲ್ಲಿ 932 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. 6,53,829 ಜನರು ಇದುವರೆಗೂ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 106214. ರಾಜ್ಯದಲ್ಲಿ ಕೋವಿಡ್ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 6.38 ಆಗಿದೆ.

ಅಕ್ಟೋಬರ್ 19ರಂದು ಬೆಂಗಳೂರು ನಗರದಲ್ಲಿ 2481 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 310021. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 64,536.

ಸೋಮವಾರ ಬಳ್ಳಾರಿಯಲ್ಲಿ 186, ಬೆಂಗಳೂರು ಗ್ರಾಮಾಂತರದಲ್ಲಿ 173, ಚಿಕ್ಕಬಳ್ಳಾಪುರ 193, ದಕ್ಷಿಣ ಕನ್ನಡ 107, ದಾವಣಗೆರೆ 104, ತುಮಕೂರು 253 ಹೊಸ ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+