ಖುಷಿ ಸುದ್ದಿ: ಕರ್ನಾಟಕದಲ್ಲಿ ಕೊರೊನಾವೈರಸ್ ದಾಖಲೆ ಇಳಿಕೆ

ಬೆಂಗಳೂರು, ಮೇ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ತತ್ತರಿಸಿದ ಕರ್ನಾಟಕದಲ್ಲಿ ಪರಿಸ್ಥಿತಿ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಭಾರತದ ಅಂಕಿ-ಅಂಶಗಳ ಜೊತೆಗೆ ರಾಜ್ಯದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಇಳಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5041 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 115 ಮಂದಿ ಮೃತಪಟ್ಟಿದ್ದು, ಇದೇ ಅವಧಿಯಲ್ಲಿ 14,785 ಸೋಂಕಿತರು ಗುಣಮುಖರಾಗಿದ್ದಾರೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ 33,148 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ 25,81,559 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 1,62,282 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮೊದಲ ಬಾರಿಗೆ 1,000ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಒಂದು ದಿನದಲ್ಲಿ 985 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,99,143ಕ್ಕೆ ಏರಿಕೆಯಾಗಿದೆ. 16 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,335ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 48,428 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 84,172 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,32,600 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 56,26,119 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,62,97,482 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,19,23,601 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 5041 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 23, ಬಳ್ಳಾರಿ 122, ಬೆಳಗಾವಿ 95, ಬೆಂಗಳೂರು ಗ್ರಾಮಾಂತರ 133, ಬೆಂಗಳೂರು 985, ಬೀದರ್ 2, ಚಾಮರಾಜನಗರ 79, ಚಿಕ್ಕಬಳ್ಳಾಪುರ 65, ಚಿಕ್ಕಮಗಳೂರು 224, ಚಿತ್ರದುರ್ಗ 95, ದಕ್ಷಿಣ ಕನ್ನಡ 482, ದಾವಣಗೆರೆ 183, ಧಾರವಾಡ 65, ಗದಗ 21, ಹಾಸನ 522, ಹಾವೇರಿ 29, ಕಲಬುರಗಿ 26, ಕೊಡಗು 64, ಕೋಲಾರ 162, ಕೊಪ್ಪಳ 30, ಮಂಡ್ಯ 213, ಮೈಸೂರು 490, ರಾಯಚೂರು 5, ರಾಮನಗರ 25, ಶಿವಮೊಗ್ಗ 282, ತುಮಕೂರು 329, ಉಡುಪಿ 107, ಉತ್ತರ ಕನ್ನಡ 122, ವಿಜಯಪುರ 50, ಯಾದಗಿರಿ 11 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಮೇ 1ರಿಂದ ಈವರೆಗೂ 32,00,539 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ಮೊದಲ ಡೋಸ್ ನೀಡಲಾಗಿದ್ದು, 12,455 ಜನರಿಗೆ 2ನೇ ಡೋಸ್ ಲಸಿಕೆ ವಿತರಿಸಲಾಗಿದೆ. ರಾಜ್ಯದಲ್ಲಿ ಈವರೆಗೂ 7,38,100 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,83,149 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 7,04,203 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,27,738 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 97,02,628 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 23,39,181 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+