Siddaramaiah: 'ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್'
ಬೆಂಗಳೂರು,ಡಿಸೆಂಬರ್ 28: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಕಾಲೀನ ಸಮಾಜಕ್ಕೆ ಗಾಂಧೀ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವಿದೆ. ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಕನಸಿನ ಭಾರತವನ್ನು ನನಸು ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ, ಸರ್ವೋದಯ ಸಮಾಜ ರಚನೆಯ ಹರಿಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಂಡಾಡಿದರು.

ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಂಡು ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ಪ್ರತಿಮೆ ನಿಲ್ಲಿಸಲು ಇದು ಸಕಾಲವಾಗಿದೆ. ಅದಕ್ಕಾಗಿ 1 ಕೋಟಿ ವೆಚ್ಚದಲ್ಲಿ ಯೋಜನೆ ಹಮ್ಮಿಕೊಳ್ಳಲಾಗಿದೆ. ಪ್ರತಿಮೆ ಪ್ರತಿಷ್ಠಾಪಿಸುವ ಸ್ಥಳ ಇನ್ನೂ ಅಂತಿಮಗೊಂಡಿಲ್ಲ, ಶೀಘ್ರವೇ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಮನಮೋಹನ್ ಸಿಂಗ್ - ಭಾರತ ಕಂಡ ಪ್ರಾಮಾಣಿಕ ಪ್ರಧಾನಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು.
ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.
2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ ಎಂದರು.
ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಪೂರ್ತಿ ನೀಡುತ್ತಿದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಶ್ರೀಯುತರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.












Click it and Unblock the Notifications