ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಆರೋಗ್ಯ ಇಲಾಖೆ ಸುಪರ್ದಿಗೆ ಬಿಬಿಎಂಪಿ ವ್ಯಾಪ್ತಿಯ 51 ಆರೋಗ್ಯ ಕೇಂದ್ರ

|
Google Oneindia Kannada News

ಬೆಂಗಳೂರು, ಮೇ 6: "ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ" ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರಣ ಹೊಂದಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ ಸಮುದಾಯ ಕೇಂದ್ರಗಳನ್ನು ಸರ್ಕಾರವೇ ನೇರವಾಗಿ ನಿರ್ವಹಿಸಲು ತೀರ್ಮಾನಿಸಿದೆ" ಎಂದು ಸಚಿವರು ತಿಳಿಸಿದರು.

ಸ್ವಂತ ರಿಸ್ಕ್‌ನಲ್ಲಿ ಊಟ ಮಾಡಿ: ಆಹಾರ ಪರಿಶೀಲಿಸಲು ಅಧಿಕಾರಿಗಳೇ ಇಲ್ಲ ಸ್ವಂತ ರಿಸ್ಕ್‌ನಲ್ಲಿ ಊಟ ಮಾಡಿ: ಆಹಾರ ಪರಿಶೀಲಿಸಲು ಅಧಿಕಾರಿಗಳೇ ಇಲ್ಲ

ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಒಟ್ಟು 51 ಸರ್ಕಾರಿ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. ಬಿಬಿಎಂಪಿ ನೇಮಿಸಿರುವ ಸಿಬ್ಬಂದಿ, ಪಿಠೋಪಕರಣಗಳು ಮತ್ತು ಸಲಕರಣೆಗಳು ಕೂಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿಕೊಳ್ಳಲಿದೆ. ಸರ್ಕಾರದ ಎಲ್ಲಾ ಸೌಲಭ್ಯಗಳು ರಾಜ್ಯದಾದ್ಯಂತ ಒಂದೇ ರೀತಿ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

51 Health Centres Under Control Of BBMP To Be Taken Over By Health Department Says Sudhakar

ಒಟ್ಟು 51 ಆರೋಗ್ಯ ಕೇಂದ್ರಗಳು; ಬೆಂಗಳೂರು ನಗರದ ಆರೋಗ್ಯ ಅಭಿಯಾನದ ಅಡಿಯಲ್ಲಿ ಪಟ್ಟಿ ಮಾಡಿದ 35 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅದರ ಅಡಿ ಪಟ್ಟಿ ಮಾಡದ 14 ನಗರ ಪ್ರಾಥಮಿಕ ಕೇಂದ್ರಗಳು ಹಾಗೂ 2 ಸಮುದಾಯ ಆರೋಗ್ಯ ಕೇಂದ್ರಗಳು ಇನ್ನು ಮುಂದೆ ರಾಜ್ಯ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರಲಿದೆ ಎಂದು ಉಲ್ಲೇಖಿಸಲಾಗಿದೆ.

51 Health Centres Under Control Of BBMP To Be Taken Over By Health Department Says Sudhakar

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ನಿರ್ವಹಣೆ ಒಂದೇ ರೀತಿ ನಡೆಯಬೇಕು. ಸರ್ಕಾರದ ಸೌಲಭ್ಯಗಳು ನಗರದ ಪ್ರದೇಶವಾಗಿರಲಿ ಅಥವಾ ಹಳ್ಳಿಯೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯಲ್ಲಿ ಇರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಇದು ನೆರವಾಗಲಿದೆ.

Recommended Video

Mumbai Indiansನ Sudharshan ಔಟ್ ಆದ ರೀತಿ ಇದು | Oneindia Kannada

English summary
51 health centres under the control of Bruhat Bengaluru Mahanagara Palike (BBMP) to be taken over by health department said health minister Dr. K. Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X