ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC ಪರೀಕ್ಷೆ:ರಾಜ್ಯದಲ್ಲಿ ಒಟ್ಟು 51 ವಿದ್ಯಾರ್ಥಿಗಳು ಡಿಬಾರ್

|
Google Oneindia Kannada News

Recommended Video

SSLC ಪರೀಕ್ಷೆ : ಸುಮಾರು 51 ವಿದ್ಯಾರ್ಥಿಗಳು ಡಿಬಾರ್ | Oneindia Kannada

ಬೆಂಗಳೂರು, ಏಪ್ರಿಲ್ 07: ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ವಿಜಯಪುರದಲ್ಲಿ ಇಬ್ಬರು, ಕಲಬುರಗಿಯ ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಡಿಬಾರ್ ಆಗಿದ್ದಾರೆ. ಈ ಮೂಲಕ ಎಸ್ಸೆಸ್ಸೆಲ್ಸಿಯಲ್ಲಿ ಇಲ್ಲಿಯವರೆಗೆ ಒಟ್ಟಾರೆ 51 ವಿದ್ಯಾರ್ಥಿಗಳು ಡಿಬಾರ್ ಆದಂತಾಗಿದೆ. ಗಣಿತದಲ್ಲಿ ಗರಿಷ್ಠ 21 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಶೇ.2.08 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ವಿಜಯಪುರ: ಮೊದಲ ದಿನವೇ SSLC ಪ್ರಶ್ನೆ ಪತ್ರಿಕೆ ಬಹಿರಂಗವಿಜಯಪುರ: ಮೊದಲ ದಿನವೇ SSLC ಪ್ರಶ್ನೆ ಪತ್ರಿಕೆ ಬಹಿರಂಗ

ಇದೇ ತಿಂಗಳ ಏಪ್ರಿಲ್ ಕೊನೆಯ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಬರಲಿದ್ದು, ಮೇ 7ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಈ ವರ್ಷ ಸಿಬಿಎಸ್ ಇ ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವುದರಿಂದ ದೆಹಲಿ ಮತ್ತು ಹರಿಯಾಣ ರಾಜ್ಯದಲ್ಲಿ ಮರು ಪರೀಕ್ಷೆ ನಡೆಸಲಾಗುತ್ತಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಮರು ಪರೀಕ್ಷೆ ವೇಳೆ ಸಹಜವಾಗಿ ಪ್ರಶ್ನೆ ಪತ್ರಿಕೆ ಕಠಿಣವಾಗಿರುವುದಿಲ್ಲ. ಇದರಿಂದ ಉಳಿದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಮರು ಪರೀಕ್ಷೆ ನಡೆದ ರಾಜ್ಯಗಳ ಫಲಿತಾಂಶ ಉಳಿದ ರಾಜ್ಯಗಳಿಗಿಂತ ಉತ್ತಮವಾಗಲಿದೆ ಇದು ಆತಂಕಕಾರಿ ಬೆಳವಣಿಗೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ: 10ಸಾವಿರ ವಿದ್ಯಾರ್ಥಿಗಳಿಗಿಲ್ಲ ಪ್ರವೇಶಎಸ್ಸೆಸ್ಸೆಲ್ಸಿ ಪರೀಕ್ಷೆ: 10ಸಾವಿರ ವಿದ್ಯಾರ್ಥಿಗಳಿಗಿಲ್ಲ ಪ್ರವೇಶ

ಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪದೇ ಪದೆ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ನಿಗ್ರಹಿಸಲಾಗುತ್ತಿದ್ದು, ನಾಲ್ಕು ಹಂತಗಳಲ್ಲಿ ಜಾರಿಗೊಳಿಸಿದ್ದ ಸುರಕ್ಷಾ ವಿಧಾನಗಳಿಂದ ಇಂದು ಸಾಧ್ಯವಾಗಿದೆ. ರಾಜ್ಯದ ವಿದ್ಯಾರ್ಥಿಗಳು ಪೋಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಕಾರವೂ ಇದಕ್ಕೆ ಕಾರಣ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ

ಏ.16ರಿಂದ 25ರವರೆಗೆ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದ್ದು, ಮೇ 7ರಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ವೆಬ್‌ಸೈಟ್‌ನಲ್ಲಿ ಹಾಗೂ ಮೇ 8ರಂದು ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದರು.

ಏಪ್ರಿಲ್ 8ರಂದು ಮಾದರಿ ಉತ್ತರ ಪತ್ರಿಕೆ ಪ್ರಕಟ: ಎಸ್ಸೆಸ್ಸೆಲ್ಸಿ ಮಾದರಿ ಉತ್ತರ ಪತ್ರಿಕೆಗಳನ್ನು ಏ.8ರಂದು ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

ಈವರೆಗೆ ಶಿಕ್ಷಕರ ಸಂಘಗಳ ನೇತೃತ್ವದಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಮುಂದಿನ ವರ್ಷದಿಂದ ಮಂಡಳಿಯಿಂದಲೇ ರಾಜ್ಯಮಟ್ಟದ ಪೂರಕ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಸಚಿವರು ಹೇಳಿದರು. ಎಸ್ಸೆಸ್ಸೆಲ್ಸಿ ಮಾದರಿ ಉತ್ತರ ಪತ್ರಿಕೆಗಳನ್ನು ಏ.8ರಂದು ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಉತ್ತರಕ್ಕೆ ಸಂಬಂಧಿಸಿದ ಆಕ್ಷೇಪಣೆಗಳಿದ್ದಲ್ಲಿ ಏ.10ರವರೆಗೆ ಸಲ್ಲಿಸಬಹುದು. ಆಕ್ಷೇಪಣೆ ಪರಿಶೀಲನೆ ಬಳಿಕ ಏ.11 ರಂದು ಪ್ರಶ್ನೆ ಪತ್ರಿಕೆ ರಚನೆಕಾರರು ಮತ್ತು ವಿಷಯವಾರು ಶಿಕ್ಷಕರ ಸಮಿತಿಯಿಂದ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಪರೀಕ್ಷಾ ವಿದಾನ ಮಾದರಿ

ಪರೀಕ್ಷಾ ವಿದಾನ ಮಾದರಿ

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಈಗ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಕರ್ನಾಟಕದಲ್ಲಿ ಸತತ ಎರಡು ವರ್ಷಗಳಿಂದ ರಾಜ್ಯ ಸರ್ಕಾರ ಅನುಸರಿಸಿರುವ ನೂತನ ಪರೀಕ್ಷಾ ವಿಧಾನ ಇಡೀ ರಾಷ್ಟ್ರಕ್ಕೆ ಮಾದಿಯಾಗಿದೆ. ರಾಜ್ಯದಲ್ಲಿ ಅನುಸರಿಸಿರುವ ನೂತನ ಪರೀಕ್ಷಾ ಪದ್ಧತಿಬಗ್ಗೆ ಎನ್‌ಸಿಇಆರ್ ಟಿ ಹಾಗೂ ಸಿಬಿಎಸ್ಇ ಮತ್ತು ಪಿಯು ಮಂಡಳಿಗಳಿಂದ ಮಾಹಿತಿ ಕೇಳಿವೆ. ರಾಜ್ಯದಲ್ಲಿ ಸನುಸರಿಸುವ ಪ್ರಶ್ನೆ ಪತ್ರಿಕೆಗಳ ಬಾರ್ ಕೋಡಿಂಗ್ ಪದ್ಧತಿ ದೇಶದ ಯಾವುದೇ ರಾಜ್ಯದಲ್ಲಿ ಇಲ್ಲ.

ವಿದ್ಯಾರ್ಥಿಗಳ ಸಹಕಾರದಿಂದ ಪ್ರಶ್ನೆಪತ್ರಿಕೆ ಸೋರಿಕೆಗೆ ತಡೆ

ವಿದ್ಯಾರ್ಥಿಗಳ ಸಹಕಾರದಿಂದ ಪ್ರಶ್ನೆಪತ್ರಿಕೆ ಸೋರಿಕೆಗೆ ತಡೆ

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪದೇ ಪದೆ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ನಿಗ್ರಹಿಸಲಾಗುತ್ತಿದ್ದು, ನಾಲ್ಕು ಹಂತಗಳಲ್ಲಿ ಜಾರಿಗೊಳಿಸಿದ್ದ ಸುರಕ್ಷಾ ವಿಧಾನಗಳಿಂದ ಇಂದು ಸಾಧ್ಯವಾಗಿದೆ. ರಾಜ್ಯದ ವಿದ್ಯಾರ್ಥಿಗಳು ಪೋಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸಹಕಾರವೂ ಇದಕ್ಕೆ ಕಾರಣ ಎಂದರು.

English summary
This year sslc exam was witnessed for 51 devbared students. In maths it was more and 2.8 students absent for exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X