ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ 510 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು, ಏಪ್ರಿಲ್ 24: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮಿತಿ ಮೀರುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಹಲವು ಪೊಲೀಸ್ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

ರಾಜ್ಯದೆಲ್ಲೆಡೆ 510 ಪೊಲೀಸರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಿನಲ್ಲಿ 302 ಪೊಲೀಸರಿಗೆ ಸೋಂಕು ದೃಢಪಟ್ಟಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

10,000 ಕರ್ನಾಟಕ ಪೊಲೀಸರಿಗೆ ಕೊರೊನಾವೈರಸ್ ಪಾಸಿಟಿವ್!10,000 ಕರ್ನಾಟಕ ಪೊಲೀಸರಿಗೆ ಕೊರೊನಾವೈರಸ್ ಪಾಸಿಟಿವ್!

470 ಪೊಲೀಸ್ ಸಿಬ್ಬಂದಿ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದು, 40 ಪೊಲೀಸರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ಕು ಪೊಲೀಸರು ಕೊರೊನಾದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

510 Police Tested Coronavirus Positive In State

ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವ ಪೊಲೀಸರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲಾಖೆ ಮಾಹಿತಿ ಪ್ರಕಾರ ಈಗಾಗಲೇ 15,800 ಸಿಬ್ಬಂದಿ ಕೊರೊನಾ ಲಸಿಕೆ ಪಡೆದಿದ್ದಾರೆ. ಇವರಲ್ಲಿ 9700 ಸಿಬ್ಬಂದಿ ಎರಡನೇ ಬಾರಿ ಲಸಿಕೆ ಹಾಕಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಈಚೆಗಷ್ಟೆ ತಮ್ಮ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಕೊರೊನಾ ಸೋಂಕು ಕಂಡುಬಂದ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಿರಿಯ ಅಧಿಕಾರಿಗಳಿಗೆ ಆದೇಶಿಸಿದ್ದರು.

Recommended Video

KL Rahul ಮುಂಬೈ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಇದೇ ಕಾರಣಕ್ಕೆ | Oneindia Kannada

ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಮೊದಲ ಅಲೆಯ ಸಂದರ್ಭದಲ್ಲಿ 9,695 ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ. ಎರಡನೇ ಅಲೆಯಲ್ಲಿ ಏಪ್ರಿಲ್ 1ರವರೆಗಿನ ಅಂಕಿ-ಅಂಶದ ಪ್ರಕಾರ 295 ಭದ್ರತಾ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದು ಎರಡು ದಿನಗಳ ಹಿಂದಷ್ಟೆ ಆಡಳಿತ ವಿಭಾಗದ ಪೊಲೀಸ್ ಮಹಾನಿರ್ದೇಶಕ ಎಂ ಎ ಸಲೀಂ ಮಾಹಿತಿ ನೀಡಿದ್ದರು. ಕಳೆದ ಒಂದು ವರ್ಷದಲ್ಲಿ ರಾಜ್ಯದ ಶೇ.10ರಷ್ಟು ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ತಿಳಿಸಿದ್ದರು.

English summary
State police department 510 staff tested coronavirus positive in karnataka says source,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X