ಕರ್ನಾಟಕ; ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಿವೆ 518 ಖಾಸಗಿ ಆಸ್ಪತ್ರೆ

ಬೆಂಗಳೂರು, ಜೂನ್ 21 : ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಸೋಂಕಿತರಿಗೆ ಚಿಕಿತ್ಸೆ ನೀಡಲು 518 ಖಾಸಗಿ ಆಸ್ಪತ್ರೆಗಳನ್ನು ಗುರಿತಿಸಿದೆ.

Recommended Video

      ಚೀನಾಗೆ 'ಕ್ಲೀನ್ ಚಿಟ್' ನೀಡಿದ್ರಾ ಮೋದಿ? ಪಿ ಚಿದಂಬರಂ ಸರಣಿ ಪ್ರಶ್ನೆಗಳು | P Chidambaram | Oneindia Kannada

      ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆ ಯಡಿ ಬರುವ 518 ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳನ್ನು ಸರ್ಕಾರ ಗುರುತಿಸಿದೆ. ಬೆಂಗಳೂರು ನಗರದಲ್ಲಿ 44 ಆಸ್ಪತ್ರೆಗಳನ್ನು ಗುರುತಿಸಲಾಗಿದೆ.

      ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವೆಬ್‌ಸೈಟ್‌ನಲ್ಲಿ ಖಾಸಗಿ ಆಸ್ಪತ್ರೆಗಳ ಪಟ್ಟಿಯನ್ನು ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ - 19 ಸೋಂಕಿತರಿಗೆ ಚಿಕಿತ್ಸೆ ನೀಡಲು ಹಾಸಿಗೆಗಳ ಕೊರತೆ ಇರುವ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ.

      518 Private Hospitals To Treat COVID 19 Patients

      ಬೆಂಗಳೂರು ನಗರದಲ್ಲಿ ಕಂಠೀರವ ಮತ್ತು ಕೋರಮಂಗಲ ಒಳಾಂಗಣ ಕ್ರೀಡಾಂಗಣ ಮತ್ತು ಶ್ರೀ ರವಿಶಂಕರ್ ಆಶ್ರಮವನ್ನು ಬಿಬಿಎಂಪಿ ಕೋವಿಡ್ -19 ಕೇರ್ ಸೆಂಟರ್ ಎಂದು ಗುರುತಿಸಿದೆ. ಸೋಂಕಿನ ಲಕ್ಷಣ ಕಂಡು ಬಂದವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

      ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 16 ಸರ್ಕಾರಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆ ಎಂದು ಘೋಷಣೆ ಮಾಡಿದೆ. ಈ ಆಸ್ಪತ್ರೆಗಳಲ್ಲಿ ಒಟ್ಟು 1330 ಹಾಸಿಗೆಗಳು ಲಭ್ಯವಿದೆ. ಇವುಗಳಲ್ಲಿ 527 ಆಮ್ಲಜನಕ ವ್ಯವಸ್ಥೆಗಳನ್ನು ಒಳಗೊಂಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+