24 ಗಂಟೆ ಕಥೆ: ಕರ್ನಾಟಕದಲ್ಲಿ 500 ಗಡಿ ದಾಟಿದ ಕೊರೊನಾವೈರಸ್

ಬೆಂಗಳೂರು, ಫೆಬ್ರವರಿ.28: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಾ ಸಾಗಿದೆ. ಕಳೆದ 24 ಗಂಟೆಗಳಲ್ಲಿ 521 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಒಂದು ದಿನದಲ್ಲಿ 350 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು,5 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೂ 933097 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 951251 ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ 12331 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 5804 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

 521 New Coronavirus Cases Reported in Karnataka Today, State Tally Rise to 951251

ಕರ್ನಾಟಕದಲ್ಲಿ 521 ಮಂದಿಗೆ ಕೊರೊನಾ ಪಾಸಿಟಿವ್:

ರಾಜ್ಯದಲ್ಲಿ ಒಟ್ಟು 521 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 8, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು 312, ಬೀದರ್ 10, ಚಾಮರಾಜನಗರ 3, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 3, ಚಿತ್ರದುರ್ಗ 6, ದಕ್ಷಿಣ ಕನ್ನಡ 24, ದಾವಣಗೆರೆ 5, ಧಾರವಾಡ 6, ಗದಗ 2, ಹಾಸನ 11, ಹಾವೇರಿ 0, ಕಲಬುರಗಿ 20, ಕೊಡಗು 6, ಕೋಲಾರ 7, ಕೊಪ್ಪಳ 0, ಮಂಡ್ಯ 1, ಮೈಸೂರು 11, ರಾಯಚೂರು 4, ರಾಮನಗರ 0, ಶಿವಮೊಗ್ಗ 2, ತುಮಕೂರು 15, ಉಡುಪಿ 16, ಉತ್ತರ ಕನ್ನಡ 4, ವಿಜಯಪುರ 11, ಯಾದಗಿರಿ 5 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      ಕೈ ಕೊಟ್ಟ ಕೊರೊನಾ ವ್ಯಾಕ್ಸಿನ್‌ ಪೋರ್ಟಲ್‌..! ಸರ್ಕಾರದ ಅವ್ಯವಸ್ಥೆಗೆ ಹಿರಿಯನಾಗರಿಕರ ಬೇಸರ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+