ಬೆಂಗಳೂರಲ್ಲಿ 3728 ಸೇರಿ ಕರ್ನಾಟಕದಲ್ಲಿ 5279 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಏಪ್ರಿಲ್ 5: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ಬರೋಬ್ಬರಿ 5279 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಇದರೊಂದಿಗೆ ಸೋಂಕಿತರ ಸಂಖ್ಯೆ 10,20,434ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತದಲ್ಲಿ ಮತ್ತೆ ಲಕ್ಷ ದಾಟಿದ ಕೊರೊನಾ ಪ್ರಕರಣ; 1,03,558 ಹೊಸ ಪ್ರಕರಣ ದಾಖಲು
ಬೆಂಗಳೂರಿನಲ್ಲಿ ಇಂದು 3728 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,50,759ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 1856 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,65,275ಕ್ಕೆ ಏರಿಕೆಯಾಗಿದೆ. ಇನ್ನು 42483 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 345 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,03,558 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 478 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್‌ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಆಗಿದೆ.