Breking: ಕರ್ನಾಟಕದಲ್ಲಿ ಒಂದೇ ದಿನ 5483 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಜುಲೈ.31: ಕರ್ನಾಟಕದಲ್ಲಿ ಕೊರೊನಾವೈರಸ್ ಮಹಾಸ್ಫೋಟ ಮೇಲಿಂದ ಮೇಲೆ ಸಂಭವಿಸುತ್ತಲೇ ಇದೆ. ಶುಕ್ರವಾರ ಕೂಡಾ ರಾಜ್ಯದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತಿದೆ.

ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 5483 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ಖಾತ್ರಿಯಾಗಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 124155ಕ್ಕೆ ಏರಿಕೆಯಾಗಿದೆ.

ರಾಜ್ಯದ ಒಟ್ಟು 124155 ಸೋಂಕಿತ ಪ್ರಕರಣಗಳ ಪೈಕಿ 49788 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 72005 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 84 ಮಂದಿ ಪ್ರಾಣ ಬಿಟ್ಟಿದ್ದಾರೆ. ಕೊವಿಡ್-19ಗೆ ಬಲಿಯಾದವರ ಸಂಖ್ಯೆ 2314ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊವಿಡ್-19 ತಪಾಸಣೆ ಅಂಕಿ-ಸಂಖ್ಯೆ

ರಾಜ್ಯದಲ್ಲಿ ಕೊವಿಡ್-19 ತಪಾಸಣೆ ಅಂಕಿ-ಸಂಖ್ಯೆ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 22164 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 14772 ಜನರಿಗೆ RT-PCR ತಪಾಸಣೆ ನಡೆಸಲಾಗಿದೆ. ಒಂದೇ ದಿನ 36936 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 1350792 ಜನರಿಗೆ ಕೊವಿಡ್-19 ತಪಾಸಣೆ ಮಾಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಅಟ್ಟಹಾಸ ಮುಂದುವರಿಕೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಅಟ್ಟಹಾಸ ಮುಂದುವರಿಕೆ

ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಸಾಗಿದೆ. ಒಂದೇ ದಿನ ಬೆಂಗಳೂರಿನಲ್ಲೇ 2220 ಮಂದಿಗೆ ಕೊವಿಡ್-19 ಸೋಂಕು ಅಂಟಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 55544ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಒಂದೇ ದಿನ 20 ಮಂದಿ ಪ್ರಾಣ ಬಿಟ್ಟಿದ್ದು, ಇದುವರೆಗೂ ಸಿಲಿಕಾನ್ ಸಿಟಿಯೊಂದರಲ್ಲೇ ಹೆಮ್ಮಾರಿಗೆ 1029 ಜನರು ಉಸಿರು ಚೆಲ್ಲಿದ್ದಾರೆ.

ಜಿಲ್ಲಾವಾರು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ?

ಜಿಲ್ಲಾವಾರು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ?

ರಾಜ್ಯದಲ್ಲಿ ಒಟ್ಟು 5483 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, 30 ಜಿಲ್ಲೆಗಳಲ್ಲೂ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು 2220, ಬಳ್ಳಾರಿ 340, ಬೆಳಗಾವಿ 217, ಉಡುಪಿ 213, ದಕ್ಷಿಣ ಕನ್ನಡ 204, ಮೈಸೂರು 204, ಧಾರವಾಡ 180, ಶಿವಮೊಗ್ಗ 158, ಕಲಬುರಗಿ 144, ದಾವಣಗೆರೆ 122, ರಾಯಚೂರು 119, ವಿಜಯಪುರ 118, ಬೆಂಗಳೂರು ಗ್ರಾಮಾಂತರ 105, ಬೀದರ್ 104, ಹಾಸನ 100, ತುಮಕೂರು 95, ಉತ್ತರ ಕನ್ನಡ 92, ಗದಗ 92, ರಾಮನಗರ 89, ಬಾಗಲಕೋಟೆ 88, ಚಿಕ್ಕಮಗಳೂರು 74, ಮಂಡ್ಯ 65, ಹಾವೇರಿ 57, ಯಾದಗಿರಿ 56, ಚಿಕ್ಕಬಳ್ಳಾಪುರ 48, ಚಾಮರಾಜನಗರ 44, ಕೊಪ್ಪಳ 38, ಚಿತ್ರದುರ್ಗ 35, ಕೋಲಾರ 32, ಕೊಡಗು 30 ಮಂದಿಗೆ ಸೋಂಕು ಅಂಟಿಕೊಂಡಿದೆ.

ಕರ್ನಾಟಕದಲ್ಲಿ ಒಂದೇ ದಿನ 3130 ಮಂದಿ ಗುಣಮುಖ

ಕರ್ನಾಟಕದಲ್ಲಿ ಒಂದೇ ದಿನ 3130 ಮಂದಿ ಗುಣಮುಖ

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ಸೋಂಕಿತರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗುತ್ತಿದೆ. ರಾಜ್ಯದಲ್ಲಿ ಗುಣಮುಖರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 3130 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರ 1113, ಮೈಸೂರು 302, ಯಾದಗಿರಿ 237, ಬೆಂಗಳೂರು ಗ್ರಾಮಾಂತರ 193, ಕಲಬುರಗಿ 148, ಬಳ್ಳಾರಿ 148, ದಾವಣಗೆರೆ 136, ಬೆಳಗಾವಿ 88, ಉತ್ತರ ಕನ್ನಡ 82, ಬೀದರ್ 74, ದಕ್ಷಿಣ ಕನ್ನಡ 70, ಧಾರವಾಡ 64, ಉಡುಪಿ 54, ವಿಜಯಪುರ 49, ರಾಯಚೂರು 46, ಚಿಕ್ಕಬಳ್ಳಾಪುರ 46, ಕೋಲಾರ 42, ಮಂಡ್ಯ 42, ಚಾಮರಾಜನಗರ 36, ಹಾವೇರಿ 34, ಚಿತ್ರದುರ್ಗ 27, ಗದಗ 24, ಕೊಡಗು 23, ಹಾಸನ 20, ಕೊಪ್ಪಳ 18, ತುಮಕೂರು 9, ಚಿಕ್ಕಮಗಳೂರು 5 ಮಂದಿ ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+